
ಕೊಕ್ಕಡ ಎ.13: ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಕೊಕ್ಕಡದ ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳೆದ 3 ವರ್ಷಗಳಿಂದ ಆಡಳಿತದಲ್ಲಿದ್ದ ವ್ಯವಸ್ಥಾಪನಾ ಸಮಿತಿಯ ಅವಧಿಯು ಮಾರ್ಚಿ 30 ರಂದು ಮುಕ್ತಾಯವಾಗಿದ್ದು ಎಪ್ರಿಲ್ 8 ರಂದು ಬೆಳ್ತಂಗಡಿಯ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಇವರಿಗೆ ಅಧಿಕಾರ ಹಸ್ತಾಂತರಿಸಲಾಯಿತು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ. ಸುಬ್ರಹ್ಮಣ್ಯ ಶಬರಾಯ ಮತ್ತು ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ವಿಶ್ವನಾಥ ಕೊಲ್ಲಾಜೆ, ಪಿ.ವಿಶ್ವನಾಥ ಶೆಟ್ಟಿ, ಪ್ರಶಾಂತ್ ರೈ ಅರಂತಬೈಲು, ಅಣ್ಣಪ್ಪ ಗೌಡ ಕಾಶಿ, ಗಣೇಶ ಪಿ.ಕೆ., ಸಿನಿ ಗುರುದೇವನ್, ಸೌಮ್ಯ ಪ್ರಕಾಶ್ , ಅರ್ಚಕ ಸತ್ಯಪ್ರಿಯ ಕಲ್ಲೂರಾಯ ತಮ್ಮ ಅವಧಿಯ ಅಧಿಕಾರವನ್ನು ಬೆಳ್ತಂಗಡಿ ತಹಶೀಲ್ದಾರ್ ರವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ದೇವಳದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಶ್ಚಂದ್ರ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು,ಗ್ರಾಮಕರಣಿಕ ರೂಪೇಶ್ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಗುರುಮೂರ್ತಿ.ಎಸ್.ಕೊಕ್ಕಡ.








