ಬೆಳ್ತಂಗಡಿ: ಕೊರೋನಾ ಸೋಂಕು ಹರಡುವಿಕೆಯ ಭೀತಿಯ ಹಿನ್ನೆಲೆಯಲ್ಲಿ ಸರಕಾರಿ ಪ್ರಾಯೋಜಿತ ಅಂಬೇಡ್ಕರ್ ಜಯಂತಿಯನ್ನು ಎಪ್ರಿಲ್ 14ರಂದು ಬೆಳ್ತಂಗಡಿಯ ಮಿನಿವಿಧಾನಸೌಧದ ಸಭಾಂಗಣದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಸಾಂಕೇತಿಕವಾಗಿ ಆಚರಿಸಲಾಯಿತು.
ಸಂವಿಧಾನಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿ ಆಚರಿಸಲಾದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ತಹಶೀಲ್ದಾರ್ ಗಣಪತಿ ಶಾಸ್ತ್ರಿ, ತಾಲೂಕು ಪಂಚಾಯತಿನ ಕಾರ್ಯನಿರ್ವಹಣಾಧಿಕಾರಿ ಜಯರಾಮ್, ಸಮಾಜ ಕಲ್ಯಾಣ ಇಲಾಖೆಯ ಹೇಮಾವತಿ, ತಾಲೂಕು ಪಂಚಾಯತಿನ ಜಯಾನಂದ ಮತ್ತಿತರರು ಹಾಜರಿದ್ದರು.
ಎಲ್ಲ ಸರಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಾಸ್ಕ್ ಧರಿಸಿಯೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕೊರೋನಾ ಭೀತಿಯಿಂದಾಗಿ ತಾಲೂಕಿನ ಯಾವೊಬ್ಬ ಜನಪ್ರತಿನಿಧಿಯೂ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ.








