ಮೂಡುಬಿದಿರೆ : ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು 18ನೇ ವಾರ್ಡಿನ ಗೋವುಗುಡ್ಡೆ 5 ಸೆಂಟ್ಸ್ ನ ಅರ್ಹ ಕುಟುಂಬಗಳಿಗೆ ವಾರ್ಡ್ ಸದಸ್ಯ ಜೊಸ್ಸಿ ಮಿನೇಜಸ್ ಅವರು ವೈಯಕ್ತಿಕ ನೆಲೆಯಲ್ಲಿ ನೀಡಿರುವ ಅಕ್ಕಿ, ತರಕಾರಿ ಮತ್ತು ನಿತ್ಯ ಬಳಕೆಯ ವಸ್ತುಗಳನ್ನು ಒಳಗೊಂಡಿರುವ ಆಹಾರದ ಕಿಟ್ ಗಳನ್ನು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ವಿತರಿಸಿದರು.
ಮಾಸ್ಕ್ ತೊಟ್ಟು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕಿಟ್ ಗಳನ್ನು ವಿತರಿಸಿ ಮಾತನಾಡಿದ ಅಭಯಚಂದ್ರ ಜೈನ್ ಅವರು ಕೊರೋನಾ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಲಾಕ್ ಡೌನ್ ಗೆ ಆದೇಶಿಸಿರುವುದರಿಂದ ನಿತ್ಯ ದುಡಿದು ತಿನ್ನುವ ಕುಟುಂಬಗಳು ಸಂಕಷ್ಟಕ್ಕೆ ಒಳಗಾಗಿದ್ದು, ಜನ ಪ್ರತಿನಿಧಿಗಳು ಜನರ ಸಂಕಷ್ಟದೊಂದಿಗೆ ಸ್ಪಂದಿಸಿ ನೆರವಾಗಬೇಕಾಗಿದೆ. ಈ ನಿಟ್ಟಿನಲ್ಲಿ ಪುರಸಭಾ ಸದಸ್ಯ ಜೊಸ್ಸಿ ಮಿನೇಜಸ್ ಅವರು ನೀಡಿರುವ ಕೊಡುಗೆ ಶ್ಲಾಘನೀಯವಾಗಿದೆ ಎಂದರು.
ಪುರಸಭಾ ಸದಸ್ಯ ಜೊಸ್ಸಿ ಮಿನೇಜಸ್, ಅವರ ಕುಟುಂಬ ಸದಸ್ಯ ಲಾಯ್ಡ್ ಮಿನೇಜಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಪುರಸಭಾ ಸದಸ್ಯ ಸುರೇಶ್ ಕೊಟ್ಯಾನ್, ಮಾಜಿ ಸದಸ್ಯೆ ಮೇರಿ ಪಿರೇರಾ, ಲಯನ್ಸ್ ಕ್ಲಬ್ ಅಧ್ಯಕ್ಷ ಮೆಲ್ವಿನ್ ಡಿಕೊಸ್ತ, ಕಲ್ಲಬೆಟ್ಟು ಸೇವಾ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ಆಲ್ವಿನ್ ಮಿನೇಜಸ್, ಐವನ್ ಮಿನೇಜಸ್ ಮತ್ತಿತರರು ಉಪಸ್ಥಿತರಿದ್ದರು








