ಮೃತರ ಅಂತ್ಯಸಂಸ್ಕಾರಕ್ಕೆ ಅಡ್ಡಿ ಪಡಿಸಿದ ಶಾಸಕರ ವಿರುದ್ಧ ಕ್ರಮಕ್ಕೆ ಎಂ.ಎಲ್.ಸಿ. ಹರೀಶ್ ಕುಮಾರ್ ಆಗ್ರಹ

ಮಧ್ಯಮವರ್ಗದವರ ಸಂಕಷ್ಟಕ್ಕೆ ಎಂ.ಎಲ್.ಸಿ. ಹರೀಶ್ ಕುಮಾರ್ ಸಹಾನುಭೂತಿ
Facebook
Twitter
LinkedIn
WhatsApp

ಜಿಲ್ಲೆಯಲ್ಲಿ ಕೋವಿಡ್ ನಿಂದ ಮೃತ ಪಟ್ಟ ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ಅವಕಾಶ ನೀಡದೆ ತಡರಾತ್ರಿಯವರೆಗೆ ಜಿಲ್ಲಾಡಳಿತವನ್ನು ತಡೆದ ಜಿಲ್ಲೆಯ ಶಾಸಕರುಗಳ ವಿರುದ್ದ ಕೂಡಲೇ ಸರಕಾರ ಕೇಸು ದಾಖಲಿಸಿ ಬಂಧಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೆ ಹರೀಶ್ ಕುಮಾರ್ ಒತ್ತಾಯಿಸಿದ್ದಾರೆ.
ಬೆಳ್ತಂಗಡಿ ಯಲ್ಲಿ ಎಪ್ರಿಲ್ 24ರಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಮೃತದೇಹವನ್ನು ಗೌರವಯುತವಾಗಿ ಅಂತ್ಯಕ್ರಿಯೆ ನಡೆಸಬೇಕಾಗಿದೆ. ಅಲ್ಲಿ ಯಾವುದೇ ರೀತಿಯಲ್ಲಿ ಸೋಂಕು ಹರಡುವ ಸಾಧ್ಯತೆಗಳಿಲ್ಲ ಆದರೂ ಉದ್ದೇಶ ಪೂರ್ವಕವಾಗಿ ಬೇಜವಾಬ್ದಾರಿಯಿರುವ ಶಾಸಕರೆ ಮುಂದೆ ನಿಂತು ಅದನ್ನು ತಡೆದಿದ್ದಾರೆ. ಇದು ಬಹಳ ಬೇಸರದ ವಿಚಾರವಾಗಿದೆ, ಇದು ಕೊರೋನಾ ವಿರುದ್ದದ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ ಇದೇ ರೀತಿಯಲ್ಲಿ ಮುಂದುವರಿದರೆ ನಾವು ಕೊರೋನಾ ವಿರುದ್ದ ಹೋರಾಡುವುದು ಹೇಗೆ? ಎಂದು ಪ್ರಶ್ನಿಸಿದ ಹರೀಶ್ ಕುಮಾರ್; ಅಂತಹ ಶಾಸಕರ ವಿರುದ್ದ ಪ್ರಕರಣ ದಾಖಲಿಸಬೇಕು ಎಂದರು.
ರಾಜ್ಯ ಸರಕಾರ ವೈದ್ಯಕೀಯ ಸಿಬಂದಿಗಳಿಗೆ ತರಿಸಿರುವ ಕಿಟ್ ಗಳು ಕಳಪೆ ಗುಣಮಟ್ಟದ್ದಾಗಿದೆ ಎಂಬ ವರದಿಗಳು ಮಾಧ್ಯಮಗಳಲ್ಲಿ ಬರುತ್ತಿದ್ದು ಇದನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು ಹಾಗೂ ಇದಕ್ಕೆ ಕಾರಣವಾದ ಅಧಿಕಾರಿಗಳ ವಿರುದ್ದ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕೇವಲ ಹಿತೋಪದೇಶದಿಂದ ಏನೂ ಸಾದನೆಯಾಗದು. ಸರಕಾರ ಕೂಡಲೇ ಜನರ ಅಗತ್ಯಗಳಿಗೆ ಸ್ಪಂದಿಸುವ ಕಾರ್ಯವನ್ನು ಮಾಡಬೇಕಾಗಿದೆ. ಜನರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ಸ್ಥಿತಿಯಿದೆ. ಸರಕಾರ ಕೂಡಲೇ ಕೇರಳ ಸರಕಾರ ನೀಡಿರುವ ರೀತಿಯಲ್ಲಿ ಎಲ್ಲ ಕುಟುಂಬಗಳಿಗೂ ಅಗತ್ಯ ದಿನಬಳಕೆಯ ಸಾಮಾಗ್ರಿಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು. ಕೇಂದ್ರ ಸರಕಾರವೂ ರಾಜ್ಯದ ನೆರವಿಗೆ ಬಂದಿಲ್ಲ ಎಂದು ಆರೋಪಿಸಿದ ಅವರು ರಾಜ್ಯದ ಸಂಸದರುಗಳು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವಲ್ಲಿ ವಿಫಲರಾಗಿದ್ದಾರೆ ಎಂದರು.
ಕೇಂದ್ರದ ಬಳಿ ಗೋಧಿ, ಅಕ್ಕಿ ಹೆಚ್ಚಾಗಿದ್ದರೆ ಅದನ್ನು ಬಡವರಿಗೆ ನಿರ್ಗತಿಕರಿಗೆ ನೀಡಲಿ. ದೇಶದಾಧ್ಯಂತ ಎಷ್ಟೋ ಜನರು ಆಹಾರವಿಲ್ಲದೆ ಪರದಾಡುತ್ತಿದ್ದಾರೆ. ಅವರಿಗೆ ನೀಡದೆ ಅದನ್ನು ಸಾನಿಟೈಸರ್ ಮಾಡಲು ಬಳಸುವ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರಸ್ ಅಧ್ಯಕ್ಷ ಶೈಲೇಶ್ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್, ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಬಿ.ಕೆ ವಸಂತ್ ಹಾಜರಿದ್ದರು.

Latest News

Related Posts