ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಮಾಸ್ಕ್ ಧರಿಸಿ, ವೈಯಕ್ತಿಕ ಅಂತರ ಕಾಯ್ದು ಸಂಘ ಸಂಸ್ಥೆಗಳಿಗೆ ಮಾಸ್ಕ್ ವಿತರಣೆ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಮಾಸ್ಕ್ ಧರಿಸಿ, ವೈಯಕ್ತಿಕ ಅಂತರ ಕಾಯ್ದು  ಸಂಘ ಸಂಸ್ಥೆಗಳಿಗೆ ಮಾಸ್ಕ್ ವಿತರಣೆ
Facebook
Twitter
LinkedIn
WhatsApp

ಬಳಂಜ:ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಬಳಂಜ,
ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು ವತಿಯಿಂದ ಸಂಘ ಸಂಸ್ಥೆಗಳಿಗೆ ಮಾಸ್ಕ್ ವಿತರಣೆಯು ಎಪ್ರಿಲ್ 29 ರಂದು ಬಳಂಜದಲ್ಲಿ ನಡೆಯಿತು..
ಕೊರೊನಾ ಹಿನ್ನೆಲೆಯಲ್ಲಿ ದೇಶ ಲಾಕ್ ಡೌನ್ ಆಗಿರುವುದರಿಂದ ಸರಕಾರದ ಆದೇಶದಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಯೊಂದಿಗೆ,ಮಾಸ್ಕ್ ಧರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು ಬಳಂಜ ಗ್ರಾಮ ಪಂಚಾಯತ್, ನಾಲ್ಕೂರು ಹಾಲು ಉತ್ಪಾದಕರ ಸಹಕಾರ ಸಂಘ, ರಾಮನಗರ, ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಬಳಂಜ ಸಂಘಗಳಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್ ಎಸ್ ಮಾಸ್ಕ್ ವಿತರಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಉಪಾಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಬಳಂಜ ಗ್ರಾಮ ಪಂಚಾಯತ್ ಸದಸ್ಯ ಯಶೋಧರ ಶೆಟ್ಟಿ, ಬಳಂಜ ಮಹಿಳಾ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷೆ ಪುಷ್ಪ ಹೇವ, ಪ್ರಗತಿಪರ ಕೃಷಿಕ ವಿಶ್ವನಾಥ ಹೊಳ್ಳ ಮಜ್ಜೇನಿಬೈಲು, ಬಳಂಜ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಶಶಿಕಲಾ, ಆನಂದ ಕನಡ, ಆನಂದ ನಾಯ್ಕ ಉಪಸ್ಥಿತರಿದ್ದರು. ಕೆಲ ದಿನಗಳ ಹಿಂದಷ್ಟೇ ಇದೇ ಸಂಘಟನೆಗಳ ಪದಾಧಿಕಾರಿಗಳು ಮುಖ್ಯಮಂತ್ರಿ ಪರಿಹಾರ ನಿಧಿಗೆ ಶಾಸಕ ಹರೀಶ್ ಪೂಂಜಾರ ಮೂಲಕ ಪರಿಹಾರಧನ ಹಸ್ತಾಂತರಿಸುವಾಗ ಮಾಸ್ಕ್ ಧರಿಸದೇ, ವೈಯಕ್ತಿಕ ಅಂತರ ಕಾಪಾಡದೇ ಕೊರೋನಾ ಸೋಂಕು‌ ಹರಡದಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದನ್ನು ನಮ್ಮ ಇ-ಪೇಪರಿನಲ್ಲಿ ವರದಿ ಮಾಡಿದ್ದೆವು. ಇದೀಗ ಇಂದಿನ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸಿ, ವೈಯಕ್ತಿಕ ಅಂತರ ಕಾಪಾಡುವ ಮೂಲಕ ಇತರರಿಗೆ ಮಾದರಿಯಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಜೈಬಳಗದ ಅಭಿನಂದನೆಗಳು.

Latest News

Related Posts