ಬೆಳ್ತಂಗಡಿ ಪೊಲೀಸ್ ಠಾಣೆಗೆ ಸ್ಯಾನಿಟೈಸರ್ ಸ್ಟ್ಯಾಂಡ್ ಕೊಡುಗೆ

Facebook
Twitter
LinkedIn
WhatsApp

ಮಾಸ್ಕ್ ಧರಿಸಿ ವೈಯಕ್ತಿಕ ಅಂತರ ಕಾಪಾಡಿಕೊಂಡು ಕೊರೋನಾ ಸೋಂಕು ಹರಡುವಿಕೆಯ ಬಗ್ಗೆ ಜಾಗೃತಿ ಮೂಡಿಸುತ್ತಾ ನಡೆದ ಸರಳ‌ ಮಾದರಿ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ಬಿನವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಸ್ಯಾನಿಟೈಸರ್ ಸ್ಟ್ಯಾಂಡನ್ನು ಹಸ್ತಾಂತರಿಸಿದರು. ಬೆಳ್ತಂಗಡಿ ರೋಟರಿ ಕ್ಲಬ್ಬಿನ ಅಧ್ಯಕ್ಷ ಜಯರಾಮ್, ಸದಸ್ಯರಾದ ಬಿ. ಕೆ. ಧನಂಜಯ ರಾವ್, ಕೆ. ವಿ. ಶ್ರೀಧರ್, ಯಶವಂತ ಪಟವರ್ದನ್, ಬೆಳ್ತಂಗಡಿ ಪೊಲೀಸ್ ಇನ್ಸ್ ಪೆಕ್ಟರ್ ಪಿ. ಜಿ. ಸಂದೇಶ್ ಮತ್ತಿತರರು ಹಾಜರಿದ್ದರು. ಬೆಳ್ತಂಗಡಿ ತಾಲೂಕಿನಲ್ಲಿ ರೋಟರಿ ಕ್ಲಬ್ಬಿನವರು ಕೊರೋನಾ ಸೋಂಕು ಹರಡುವಿಕೆಯ ಬಗ್ಗೆ ಜಾಗೃತಿ ಮೂಡಿಸುವ ಜೊತೆಗೆ ಮುಂಜಾಗ್ರತಾ ಕ್ರಮವಾಗಿ ಸ್ವಚ್ಛತೆ ಕಾಪಾಡಲು ಸರಕಾರಿ ಕಛೇರಿ ಹಾಗೂ ಸಾರ್ವಜನಿಕ ಸಂಸ್ಥೆಗಳಿಗೆ ಸ್ಯಾನಿಟೈಸರ್ ಸ್ಟ್ಯಾಂಡನ್ನು ಕೊಡುಗೆಯಾಗಿ ನೀಡುವ ಸೇವಾಯೋಜನೆ ಹಮ್ಮಿಕೊಂಡಿದೆ.

Latest News

Related Posts