ಮಾಸ್ಕ್ ಹಾಗೂ ವೈಯಕ್ತಿಕ ಅಂತರದ ಬಗ್ಗೆ ಎಚ್ಚರಿಕೆ ವಹಿಸಿದ ಕಾರ್ಯಕ್ರಮ.
ಲಾಕ್ ಡೌನಿನಿಂದಾಗಿ ಸಂಕಷ್ಟಕ್ಕೆ ಒಳಗಾದ ಉಜಿರೆಯ ನೇಕಾರ ಪೇಟೆಯಲ್ಲಿನ ತೀರಾ ಬಡತನದಲ್ಲಿರುವ ಕುಟುಂಬಗಳಿಗೆ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಕೆ. ಹರೀಶ್ ಕುಮಾರ್ ರವರು ನೀಡಿರುವ ಆಹಾರದ ಕಿಟ್ ಗಳನ್ನು ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಶೈಲೇಶ್ ಕುಮಾರ್ ಮತ್ತು ಯೂತ್ ಕಾಂಗ್ರೆಸ್ ನ ಅಧ್ಯಕ್ಷರಾದ ಅಭಿನಂದನ್ ಹರೀಶ್ ಕುಮಾರ್ ವಿತರಣೆ ಮಾಡಿದರು .ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಧರ್ ಪೂಜಾರಿ ಹಾಗೂ ಬ್ಲಾಕ್ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷರಾದ ಬಿ. ಕೆ ವಸಂತ್ ,
ಹಾಗೂ ಉಜಿರೆ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಬಾಲಕೃಷ್ಣ ಗೌಡ, ಗ್ರಾಮ ಪಂಚಾಯತಿನ ಮಾಜಿ ಸದಸ್ಯರಾದ ಲೋಕಯ್ಯ ನೇಕಾರ, ಯೂತ್ ಕಾಂಗ್ರೆಸ್ ಸದಸ್ಯರಾದ ಗಣೇಶ್ ಕಣಿಯೂರು, ಬೂತ್ ಸಮಿತಿ ಅಧ್ಯಕ್ಷರಾದ ಸುಬ್ರಾಯ, ಅವಿನಾಶ್ ಮತ್ತಿತರರು ಉಪಸ್ಥಿತರಿದ್ದರು ಈ ಪ್ರದೇಶದಲ್ಲಿ ಸುಮಾರು 112 ಆಹಾರದ ಕಿಟ್ ಗಳನ್ನು ವಿತರಿಸಲಾಯಿತು. ಕಿಟ್ ಗಳ ಸಂಖ್ಯೆಗಿಂತ ಕಾರ್ಯಕ್ರಮದಲ್ಲಿ ಎಲ್ಲರೂ ಮಾಸ್ಕ್ ಧರಿಸಿ, ವೈಯಕ್ತಿಕ ಅಂತರ ಕಾಪಾಡಿ, ಕೊರೋನಾ ಸೋಂಕು ಹರಡದಂತೆ ಕೈಗೊಳ್ಳಬೇಕಾದ ಮುಂಜಾಗ್ರತೆಗಳ ಬಗ್ಗೆ ಜನಜಾಗೃತಿ ಮೂಡಿಸಿದ್ದು ಗಮನಾರ್ಹವಾಗಿತ್ತು.







