ಎಂ.ಎಲ್.ಸಿ. ಹರೀಶ್ ಕುಮಾರ್ ಭೇಟಿ-ಪರಿಶೀಲನೆ-ಸಹಾಯಹಸ್ತ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಹೊಸಂಗಡಿ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಮಳೆ ಗಾಳಿಗೆ ಕೆಂಜಲ್ ಗುರಿ ಬಾಬು ಎಂಬವರ ಮನೆಗೆ ತೀವ್ರವಾದ ಹಾನಿಯಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರಾದ ಕೆ. ಹರೀಶ್ ಕುಮಾರ್ ಮೇ 15ರಂದು ಬಾಬುರವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರಲ್ಲದೇ ವೈಯಕ್ತಿಕವಾಗಿ ಆರ್ಥಿಕ ಸಹಾಯವನ್ನು ನೀಡಿದರು. ಮಾತ್ರವಲ್ಲದೇ, ಸರಕಾರದಿಂದ ಸಿಗಬಹುದಾದ ಪರಿಹಾರವನ್ನು ಒದಗಿಸಿಕೊಡಲು ಪ್ರಯತ್ನಿಸುವುದಾಗಿ ಹೇಳಿದರು.
ಈ ಸಂದರ್ಭ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಕೆ.ಶೈಲೇಶ್ ಕುಮಾರ್ , ಪಂಚಾಯತ್ ಸದಸ್ಯರಾದ ಹರಿಪ್ರಸಾದ್, ಅಕ್ಬರ್ ಅಲಿ, ರೋಷನ್ ಎಡ್ವಿನ್ ಮೊರಸ್, ಸುಮತಿ, ರುಕ್ಮಯ, ಸ್ಥಳೀಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಬೀರ್ ಹಾಗೂ ಪಂಚಾಯತ್ ಪಿಡಿಓ ಗಣೇಶ್ ಶೆಟ್ಟಿ ಮತ್ತಿತರರು ಹಾಜರಿದ್ದರು.






