ಮಾಸ್ಕ್ ಧರಿಸಿ ವೈಯಕ್ತಿಕ ಅಂತರ ಕಾಪಾಡಿ ನಡೆದ ಒತ್ತಾಯ.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಅಕ್ಷರ ದಾಸೋಹ ಯೋಜನೆಯಡಿ ದುಡಿಯುತ್ತಿರುವ ಬಿಸಿಯೂಟ ನೌಕರರ ಹಿತ ಕಾಪಾಡಲು ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿ ಮೇ 26ರಂದು ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ರಾಜ್ಯ ಸರ್ಕಾರಕ್ಕೆ ಬೆಳ್ತಂಗಡಿ ತಹಶಿಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.
2001-02 ರಲ್ಲಿ ಪ್ರಾರಂಭವಾದ ಅಕ್ಷರ ದಾಸೋಹ ಯೋಜನೆಯಡಿ ರಾಜ್ಯದಲ್ಲಿ ಲಕ್ಷಾಂತರ ಮಹಿಳೆಯರು ದುಡಿಯುತ್ತಿದ್ದಾರೆ. ಕೊರೋನಾ ವೈರಸ್ ಲಾಕ್ ಡೌನ್ ಬಳಿಕ ಯಾವುದೇ ಪರಿಹಾರವಿಲ್ಲದೆ ಸಂಕಷ್ಟದ ಸ್ಥಿತಿಯನ್ನು ಎದುರಿಸುತ್ತಿರುವ ಬಿಸಿಯೂಟ ನೌಕರರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು , ಎಪ್ರಿಲ್, ಮೇ ತಿಂಗಳ ವೇತನ ನೀಡಬೇಕು , ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಪಿಂಚಣಿ ಬದಲಾಗಿ ಎಲ್ಐಸಿ ಆಧಾರಿತ ಪಿಂಚಣಿ ನೀಡಬೇಕು , ನೌಕರರಿಗೆ 18,000/- ಮಾಸಿಕ ವೇತನ ನೀಡಬೇಕು , ಅಲ್ಲಿಯವರೆಗೆ ರೂ 5000 ನೀಡಬೇಕು ,ಅಕ್ಷರ ದಾಸೋಹ ಯೋಜನೆಗೆ ಕಡಿತ ಮಾಡಿರುವ ಅನುದಾನವನ್ನು ಕೇಂದ್ರ ಸರ್ಕಾರ ವಾಪಸ್ ನೀಡಬೇಕು , ನೌಕರರನ್ನು ಡಿ ದರ್ಜೆಯ ನೌಕರರನ್ನಾಗಿ ಪರಿಗಣಿಸಬೇಕು , ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಸೇರಿದಂತೆ 22 ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಿಐಟಿಯು ತಾಲೂಕು ಅಧ್ಯಕ್ಷ , ನ್ಯಾಯವಾದಿ ಶಿವಕುಮಾರ್ ಎಸ್.ಎಂ , ಕಾರ್ಯದರ್ಶಿ ವಸಂತ ನಡ , ಉಪಾಧ್ಯಕ್ಷ ಶೇಖರ್ ಲಾಯಿಲ , ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಲಲಿತಾ ಮದ್ದಡ್ಕ , ಕಾರ್ಯದರ್ಶಿ ಸುಮಿತ್ರಾ ಹತ್ಯಡ್ಕ , ಐರಿನ್ ಕಕ್ಕಿಂಜೆ , ಪೂರ್ಣಿಮಾ ಚಾರ್ಮಾಡಿ , ಕಾರ್ಮಿಕ ನಾಯಕರಾದ ನ್ಯಾಯವಾದಿ ಸುಕನ್ಯಾ ಹೆಚ್ , ಸುಜೀತ್ ಉಜಿರೆ ಉಪಸ್ಥಿತರಿದ್ದರು.








