ಕೋರೋನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳ ಅನುಷ್ಠಾನಕ್ಕೆ ಅಹರ್ನಿಶಿ ಶ್ರಮಿಸುತ್ತಿರುವ ಆರೋಗ್ಯ ಇಲಾಖೆಯ ಗುತ್ತಿಗೆ ಆಧಾರಿತ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರ ಬಳಕೆಗಾಗಿ ಬೆಳ್ತಂಗಡಿಯ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಆರೋಗ್ಯ ಪರಿಕರಗಳನ್ನು ನೀಡಲಾಯಿತು.
ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಸುವರ್ಣ ಈ ಆರೋಗ್ಯ ಪರಿಕರಗಳನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ತಾಲೂಕು ವೈದ್ಯಾಧಿಕಾರಿ ಡಾl ಕಲಾಮಧುರವರಿಗೆ ಹಸ್ತಾಂತರಿಸಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹರಿಣಿ, ತಾಲೂಕು ಆರೋಗ್ಯ ಕಾರ್ಯ ವ್ಯವಸ್ಥಾಪಕ ಅಜಯ್ ಕುಮಾರ್, ರಾಜಕೇಸರಿ ಸಂಸ್ಥೆಯ ಸಂಸ್ಥಾಪಕ ದೀಪಕ್ ಜಿ., ಗುರುಪ್ರಸಾದ್ ಕೋಟ್ಯಾನ್, ಪ್ರವೀಣ್ ಕುಲಾಲ್, ನವೀನ್ ಇಂದಬೆಟ್ಟು ಮತ್ತಿತರರು ಹಾಜರಿದ್ದರು.






