ಗೃಹ ಸಚಿವ ಬೊಮ್ಮಾಯಿ ಧರ್ಮಸ್ಥಳಕ್ಕೆ

Facebook
Twitter
LinkedIn
WhatsApp
ದೇಗುಲಕ್ಕೆ ಭೇಟಿ ನೀಡುವ ಮುನ್ನ ಥರ್ಮಲ್ ಪರೋಕ್ಷೆಗೊಳಗಾಗುತ್ತಿರುವ ಸಚಿವ ಬೊಮ್ಮಾಯಿ

ಧರ್ಮಸ್ಥಳ: ಜೂನ್ 9ರಂದು ಬೆಳಿಗ್ಗೆ 11-30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ರಾಜ್ಯ ಸರಕಾರದ ಗೃಹಸಚಿವ ಬಸವರಾಜ್ ಬೊಮ್ಮಾಯಿ, ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಧರ್ಮಸ್ಥಳದ ಬೀಡಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಬೆಳ್ತಂಗಡಿಯ ತಹಶೀಲ್ದಾರ್ ಗಣಪತಿ ಶಾಸ್ತ್ರಿ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶಿವಪ್ರಸಾದ್ ಈ ಸಂದರ್ಭದಲ್ಲಿ ಸಚಿವರ ಜೊತೆಗಿದ್ದರು. ಬಳಿಕ ಸಚಿವ ಬೊಮ್ಮಾಯಿ ದೇಗುಲಕ್ಕೆ ತೆರಳಿ ಶ್ರೀ ಮಂಜುನಾಥ ಸ್ವಾಮಿಯ ದರುಶನ ಪಡೆದು, ಬೆಂಗಳೂರಿನತ್ತ ಪಯಣ ಬೆಳೆಸಿದರು.

Latest News

Related Posts