ಮಾಸ್ಕ್ ಧಾರಣೆ ಇಲ್ಲ-ವೈಯಕ್ತಿಕ ಅಂತರವೂ ಇಲ್ಲದ ಕಾರ್ಯಕ್ರಮ
ಬೆಳ್ತಂಗಡಿ: ಕೊರೋನಾ ಸೋಂಕು ಹರಡದಂತೆ ಮುನ್ನಚ್ಛರಿಕಾ ಕ್ರಮವಾಗಿ ಈ ದೇಶದ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ ಹಾಗೂ ವೈಯಕ್ತಿಕ ಅಂತರ ಕಾಪಾಡುವಿಕೆ..ಎರಡನ್ನೂ ಮರೆತು ಕೊರೋನಾ ಸೋಂಕು ಹರಡುವಿಕೆಯನ್ನು ತಡೆಯಲು ಸರಕಾರ ಹೇಳಿದ ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ, ಸರಕಾರಿ ಕಾರ್ಯಕ್ರಮವೊಂದು ಬೆಳ್ತಂಗಡಿ ತಾಲೂಕಿನ ನಾವೂರಿನಲ್ಲಿ ನಡೆಯಿತು.
ಜೂನ್ 10ರಂದು ನಡೆದ ನಾವೂರು ಗ್ರಾಮ ಪಂಚಾಯತ್‌ನ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಮಾಸ್ಕ್ ಧರಿಸಿ ಭಾಗವಹಿಸಿದರೂ, ಬಹುತೇಕ ಜನಪ್ರತಿನಿಧಿಗಳು ಹಾಗೂ ಪ್ರಮುಖರು ಮಾಸ್ಕ್ ಧರಿಸದೇ ವೈಯಕ್ತಿಕ ಅಂತರ ಮರೆಯುವ ಮೂಲಕ ಕೊರೋನಾ ಸೋಂಕು ಹರಡದಂತೆ ತಡೆಯಲು ಸರಕಾರದ ಮಾರ್ಗಸೂಚಿಗಳನ್ನು ಧಿಕ್ಕರಿಸಿ, ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ನಾವೂರು ಗ್ರಾಮ ಪಂಚಾಯತಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದರು.
ಲಾಯ್ಲ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯೆ ಸೌಮ್ಯಲತಾ ಜಯಂತ ಗೌಡ, ಬೆಳ್ತಂಗಡಿ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ವೇದಾವತಿ, ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ, ಉಪಾಧ್ಯಕ್ಷ ಗಣೇಶ್ ಗೌಡ, ಬಂಗಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹರೀಶ್ ಸಾಲ್ಯಾನ್ ಮೋರ್ತಾಜೆ, ಡಾ. ಪ್ರದೀಪ್ ನಾವೂರು, ನಾವೂರು ಶ್ರೀ ಗೋಪಾಕೃಷ್ಣ ದೇವಾಲಯದ ಆಡಳಿತ ಸಮಿತಿಯ ಅಧ್ಯಕ್ಷ ಉಮೇಶ್ ಎ. ಬಿ., ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸಂಘದ ಅಧ್ಯಕ್ಷ ಹರೀಶ್ ಕಾರಿಂಜ, ಬೆಳ್ತಂಗಡಿ ತಾಲೂಕು ಪಂಚಾಯತಿನ ಮಾಜಿ ಅಧ್ಯಕ್ಷೆ ತನುಜಾ ಶೇಖರ್, ಮಾಜಿ ಸದಸ್ಯ ಗಣೇಶ್ ಕಣಾಲು, ನಾವೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ., ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಮಿತ್ತಬಾಗಿಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ, ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ, ತಾಲೂಕು ಪಂಚಾಯತಿನ ಅಶೋಕ್ ದೇವಾಡಿಗ, ನಾವೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋನಮ್ಮ, ಗ್ರಾಮ ಪಂಚಾಯತ್ ಸದಸ್ಯರುಗಳು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.






