ಜಂಟಿ ಸಮಾಲೋಚನಾ ಸಭೆ ಕರೆಯಲು‌ ಮನವಿ

Facebook
Twitter
LinkedIn
WhatsApp

ಬೆಳ್ತಂಗಡಿ: ರಾಜ್ಯ ಸರಕಾರಿ ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಹಾಗೂ ಸೇವಾ ಸೌಲಭ್ಯಗಳಿಗೆ ಸ್ಪಂದಿಸಲು ರಾಜ್ಯ ಸರಕಾರದ ಸೂಚನೆಯಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚನೆಯಾದ ಜಂಟಿ ಸಮಾಲೋಚನಾ ಸಮಿತಿಯ ಸಭೆಯನ್ನು ಕರೆಯುವಂತೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬೆಳ್ತಂಗಡಿ ತಾಲೂಕು ಶಾಖೆಯ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ಜಯಕೀರ್ತಿ ಜೈನ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಲಿಖಿತ‌ ಮನವಿ ನೀಡಿ ವಿನಂತಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸಾಧ್ಯವಿರುವ ತೀರ್ಮಾನ ಕೈಗೊಳ್ಳಲು ಸಹಕರಿಸಬೇಕೆಂದು ಡಾ. ಜಯಕೀರ್ತಿ ಜೈನ್ ಮನವಿಯಲ್ಲಿ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

Latest News

Related Posts