ಬಿಗ್ ಬ್ರೇಕಿಂಗ್ ನ್ಯೂಸ್ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗೆ ಕೊರೊನಾ ಪಾಸಿಟಿವ್

ಬಿಗ್ ಬ್ರೇಕಿಂಗ್ ನ್ಯೂಸ್  ಉಪ್ಪಿನಂಗಡಿಗೂ ವಕ್ಕರಿಸಿದ ಕೊರೋನಾ
Facebook
Twitter
LinkedIn
WhatsApp

ಕೊರೋನಾ ಸೋಂಕು ಬೆಳ್ತಂಗಡಿ ತಾಲೂಕಿನಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ಸೋಂಕಿತರ ಸೇವೆ ಮಾಡುತ್ತಿರುವ ಕೊರೋನಾ ವಾರಿಯರ್ಸ್‌ಗಳನ್ನೇ ಬೆಂಬಿಡದೇ ಕಾಡಲಾರಂಭಿಸಿದೆ. ಇದೀಗ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯೊಬ್ಬರಿಗೇ ಕೊರೋನಾ ಸೋಂಕು ಪಾಸಿಟಿವ್ ಬಂದಿದ್ದು, ಆಸ್ಪತ್ರೆಯ ಸಿಬ್ಬಂದಿಗಳಲ್ಲಿ ಆತಂಕವನ್ನು ಇನ್ನಷ್ಟು ಹೆಚ್ಚಿಸಿದೆ.
ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರಿಗೆ ಪ್ರತ್ಯೇಕ ವಾರ್ಡ್ ತೆರೆದು ಚಿಕಿತ್ಸೆ ಆರಂಭವಾದ ಬಳಿಕ ಇಲ್ಲಿ 10ಕೊರೋನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಎಲ್ಲ ಸೋಂಕಿತರನ್ನು ಚಿಕಿತ್ಸೆಗಾಗಿ ಕೊರೋನಾ ಸೋಂಕಿತರಿಗಾಗಿ ವಿಶೇಷ ಆಸ್ಪತ್ರೆಯಾಗಿ ಮಾರ್ಪಟ್ಟ ಉಜಿರೆ ಟಿ. ಬಿ. ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸಧ್ಯಕ್ಕೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಇಬ್ಬರು ಬಾಣಂತಿ ಕೊರೋನಾ ಸೋಂಕಿತರು ಮಾತ್ರ ಚಿಕಿತ್ಸೆ ಮತ್ತು ವಿಶ್ರಾಂತಿ ಪಡೆಯುತ್ತಿದ್ದು, ಇವರಿಬ್ಬರಿಗೆ ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಹಾಸಿಗೆ ಖಾಲಿ ಇಲ್ಲದ್ದರಿಂದ ಅನಿವಾರ್ಯವಾಗಿ ಇಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಂದರ್ಭ ಇರುವ ಸುರಕ್ಷತಾ ಸವಲತ್ತುಗಳನ್ನು ಬಳಸಿ, ಸೋಂಕಿತರಿಗೆ ಇಲ್ಲಿನ ವೈದ್ಯರು ಹಾಗೂ ಸಿಬ್ಬಂದಿವರ್ಗ ಎಚ್ಚರಿಕೆಯಿಂದಲೇ ಚಿಕಿತ್ಸೆ ನೀಡುತ್ತಿದ್ದರು. ಆದರೆ ವೈದ್ಯರು, ದಾದಿಯರು ಹಾಗೂ ಲ್ಯಾಬ್ ಟೆಕ್ನೀಷಿಯನ್‌ಗಳು ಮತ್ತು ‘ಡಿ’ಗ್ರೂಪ್ ನೌಕರರಿಗೆ ಸರಿಯಾದ ಪಿಪಿಇ ಕಿಟ್ ಸಹಿತ ಇತರ ಸುರಕ್ಷತಾ ಉಪಕರಣಗಳನ್ನು ಸರಕಾರ ಸರಿಯಾಗಿ ಸರಬರಾಜು ಮಾಡದಿರುವುದು ಆತಂಕಕ್ಕೆ ಕಾರಣವಾಗಿದೆ. ಪರಿಣಾಮವಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಲ್ಯಾಬ್ ಟೆಕ್ನೀಷಿಯನ್ ಹಾಗೂ ನಾಲ್ವರು ದಾದಿಯರಿಗೆ ಈಗಾಗಲೇ ಕೊರೋನಾ ಸೋಂಕು ಪಾಸಿಟಿವ್ ಬಂದಿದ್ದು, ಇದೀಗ ಆಸ್ಪತ್ರೆಯ ವೈದ್ಯಾಧಿಕಾರಿಯೊಬ್ಬರಿಗೂ ಕೊರೋನಾ ಪಾಸಿಟಿವ್ ಎಂದು ಗೊತ್ತಾಗಿದೆ. ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಿ ಸೇವೆ ಮಾಡಿದ ವೈದ್ಯರ ಸಹಿತ ಆರೋಗ್ಯ ಇಲಾಖೆಯ ಎಲ್ಲ ಕೊರೋನಾ ವಾರಿಯರ್ಸ್ ಶೀಘ್ರ ಗುಣಮುಖರಾಗಿ ಮತ್ತೆ ಕೊರೋನಾ ಸೋಂಕಿತರ ಸೇವೆಗೆ ಕಂಕಣಬದ್ಧರಾಗಲಿ; ಕೊರೋನಾ ವಾರಿಯರ್ಸ್‌ಗಳಿಗೆ ಕರ್ತವ್ಯದ ಸಂದರ್ಭ ಅವರ ಜೀವದ ರಕ್ಷಣೆಗೆ ಎಲ್ಲ ಸುರಕ್ಷತಾ ಕ್ರಮ ಅನುಸರಿಸಲು ಬೇಕಾದ ಎಲ್ಲ ಗುಣಮಟ್ಟದ ಪರಿಕರಗಳನ್ನು ಅಗತ್ಯವಿರುವಷ್ಟನ್ನೂ ಸರಕಾರ ಪೂರೈಸುವಂತಾಗಲಿ; ಕೊರೋನಾ ವಾರಿಯರ್ಸ್‌ಗಳ ಮನೋಬಲ ಹೆಚ್ಚುವಂತಾಗಲಿ, ಸೇವೆ ಮಾಡಲು ಹೋಗಿ ತಮಗೇ ಸೋಂಕು ತಗಲಿಸಿಕೊಂಡ ಎಲ್ಲ ಕೊರೋನಾ ವಾರಿಯರ್ಸ್‌ಗಳು ಶೀಘ್ರ ಗುಣಮುಖರಾಗಲಿ ಎಂದು ಸರ್ವಶಕ್ತನಲ್ಲಿ ಎಲ್ಲರೂ ಪ್ರಾರ್ಥಿಸೋಣಾ.

Latest News

Related Posts