“ಫಿಟ್ ಇಂಡಿಯಾ ಪ್ರೀಡಮ್ ರನ್”

“ಫಿಟ್ ಇಂಡಿಯಾ ಪ್ರೀಡಮ್ ರನ್”
Facebook
Twitter
LinkedIn
WhatsApp

ಮಡಂತ್ಯಾರು: ಕಾಲೇಜು ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ, ಫಿಸಿಕಲ್ ಎಜುಕೇಶನ್ ಫೌಂಡೇಶನ್ ಆಫ್ ಇಂಡಿಯಾ ಕರ್ನಾಟಕ, ಮತ್ತು ಫಿಟ್ ಇಂಡಿಯಾ ಇವುಗಳ ಸಹಕಾರದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ಮತ್ತು ರಾಷ್ಟೀಯ ಸೇವಾ ಯೋಜನೆ ಇವುಗಳ ಜಂಟಿ ಆಶ್ರಯದಲ್ಲಿ “ಫಿಟ್ ಇಂಡಿಯಾ ಫ್ರೀಡಮ್ ರನ್” ಕಾರ್ಯಕ್ರಮವು ಕಾಲೇಜಿನ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 5ರಂದು ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜು ಸಂಚಾಲಕರಾದ ವಂ| ಬೆಸಿಲ್ ವಾಸ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಜೋಸೆಪ್ ಎನ್. ಎಮ್., ಕಾರ್ಯಕ್ರಮ ಸಂಘಟಕರಾದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ್ ಡಿಸೋಜ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಪ್ರೊ. ಜನಾರ್ದನ್ ಪಿ. ಹಾಗೂ ಪ್ರೊ. ರಾಬಿನ್ ಜೋಸೆಫ್ ಸೆರಾ, ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಯವರು, ಹಿರಿಯ ವಿದ್ಯಾರ್ಥಿಗಳು ಹಾಗೂ ಪ್ರಸ್ತುತ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Latest News

Related Posts