ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಬೊಳಿಯಾರು ಸಮೀಪ ಸೆಪ್ಟೆಂಬರ್ 11ರಂದು ಲಾರಿ- ಪಿಕಪ್ ನಡುವೆ ಢಿಕ್ಕಿ ಸಂಭವಿಸಿ ಆದ ಭೀಕರ ರಸ್ತೆ ಅಪಘಾತದಲ್ಲಿ ಎರಡೂ ವಾಹನಗಳು ಜಖಂಗೊಂಡಿದೆ. ಎರಡು ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸುದೈವವಶಾತ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ, ಮಹಜರು ನಡೆಸಿ, ಪ್ರಕರಣ ದಾಖಲಿಸಿದ್ದಾರೆ.






