ಹೊಲಿಗೆ ಯಂತ್ರ ವಿತರಣೆ

ಹೊಲಿಗೆ ಯಂತ್ರ ವಿತರಣೆ
Facebook
Twitter
LinkedIn
WhatsApp

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ ಹಾಗೂ ಗ್ರಾಮ ಪಂಚಾಯತ್ ಉಜಿರೆ ಇದರ ಸಂಯುಕ್ತ ಆಶ್ರಯದಲ್ಲಿ ಉಜಿರೆ ಗ್ರಾಮ ಪಂಚಾಯತ್‌ನ 2020 – 2021ನೇ ಸಾಲಿನ 25% ಮೀಸಲು ಅನುದಾನದಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮವು ಅಕ್ಟೋಬರ್ 9ರಂದು ಉಜಿರೆ ಗ್ರಾಮ ಪಂಚಾಯತ್‌ನ ಸುವರ್ಣ ಸೌಧ ಸಭಾಂಗಣ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯರಾದ ಕೆ ಪ್ರತಾಪ್‌ಸಿಂಹ ನಾಯಕ್ ಹಾಗೂ ಕೆ. ಹರೀಶ್ ಕುಮಾರ್, ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ ಶಶಿಧರ ಕಲ್ಮಂಜ, ಉಜಿರೆ ಗ್ರಾಮ ಪಂಚಾಯತ್‌ನ ನಿಕಟಪೂರ್ವ ಅಧ್ಯಕ್ಷ ಶ್ರೀಧರ್ ಪೂಜಾರಿ ಮತ್ತಿತರರು ಭಾಗವಹಿಸಿದ್ದರು.

Latest News

Related Posts