ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಗ್ರಾಮೀಣ ಬ್ಲಾಕ್ ಸಮಿತಿ ಬೆಳ್ತಂಗಡಿ ಹಾಗೂ ಗ್ರಾಮ ಸಮಿತಿ ನೆರಿಯ ಇದರ ಜಂಟಿ ಆಶ್ರಯದಲ್ಲಿ ನೆರಿಯ ಗ್ರಾಮ ಪಂಚಾಯತ್ ಮಟ್ಟದ ಗ್ರಾಮ ಸಮಿತಿ ಮತ್ತು ಬೂತ್ ಸಮಿತಿಯ ಪದಾಧಿಕಾರಿಗಳ ಐಕ್ಯತಾ ಸಮಾವೇಶವು ನೆರಿಯ ಗ್ರಾಮದ ಬಯಲು ಅಂಕೋತ್ಯಾರು ಇಸುಬು ರವರ ಮನೆ ವಠಾರದಲ್ಲಿ ನಡೆಯಿತು.ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜನ್ ಜಿ. ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಸರಕಾರದ ಮಾಜಿ ಸಚಿವ ಕೆ. ಗಂಗಾಧರ ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಸಂಯೋಜಕರಾದ ಕೃಷ್ಣ ಮೂರ್ತಿ, ಉಜಿರೆ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯೆ ನಮೀತಾ ಕೆ ಪೂಜಾರಿ, ಅಳದಂಗಡಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೆಡಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎ. ಸಿ ಮ್ಯಾಥ್ಯೂ, ನೆರಿಯ ಕ್ಷೇತ್ರದ ತಾಲೂಕು ಪಂಚಾಯತ್ ಸದಸ್ಯ ವಿ. ಟಿ. ಸೆಬಾಸ್ಟಿಯನ್, ಎ.ಪಿ.ಎಂ.ಸಿ ಸದಸ್ಯ ಅಬ್ದುಲ್ ಗಪೂರ್, ಕೊಯ್ಯೂರು ಕ್ಷೇತ್ರದ ತಾಲೂಕು ಪಂಚಾಯತ್ ಸದಸ್ಯ ಪ್ರವೀಣ್ ಗೌಡ, ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ ಕಾರ್ಮಿಕ ಘಟಕದ ಕಾರ್ಯದರ್ಶಿ ಅಬ್ದುಲ್ ರೆಹಮಾನ್ ಪಡ್ಪು, ನೆರಿಯ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ರಾಮಕೃಷ್ಣ ಗೌಡ, ನೆರಿಯ ಗ್ರಾಹಕರ ಸಹಕಾರಿ ಸಂಘದ ಅದ್ಯಕ್ಷರಾದ ರಾಮ್ ಕುಮಾರ್ ಬಿ, ಮುಂಡಾಜೆ ಸಿ. ಎ. ಬ್ಯಾಂಕ್ ನಿರ್ದೇಶಕರಾದ ಸಂಜೀವ ಗೌಡ ಎಂ., ನಂದಕುಮಾರ್ ಎ., ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪಿ. ಮಹಮ್ಮದ್, ಪಿ. ಕೆ. ರಾಜನ್, ನಾರಾಯಣ ಆಚಾರಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಯಾನಂದ ಪಿ. ಬೆಳಾಲು, ಪ್ರವೀಣ್. ಸಾಮಾಜಿಕ ಜಾಲತಾಣದ ಸಂಚಾಲಕ ಇಸುಬು, 5 ಬೂತ್ ಸಮಿತಿಗಳ ಅಧ್ಯಕ್ಷರಾದ ಸಿನೋಜ್ ಎಂ. ಎ., ನಂದಕುಮಾರ್ ಎ., ಸುಧಾಕರ್, ಕೇಶವ ಪೂಜಾರಿ, ತೋಮಸ್ ವಿ. ಡಿ. ಮತ್ತಿತರರು ಉಪಸ್ಥಿತರಿದ್ದರು. ನೆರಿಯ ಗ್ರಾಮ ಸಮಿತಿ ಅಧ್ಯಕ್ಷ ಎಂ. ಜೆ. ಸೆಬಾಸ್ಟಿನ್ ಸ್ವಾಗತಿಸಿದರು. ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಬಿ. ಅಶ್ರಫ್ ನೆರಿಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಂಗ್ರೆಸ್ನ ನೆರಿಯ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಅಲಂಗಾಯಿ ವಂದಿಸಿದರು.






