ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಬಂದಿದ್ದ ರಾಜ್ಯ ಬಿಜೆಪಿ ಕಾರ್ಯದರ್ಶಿ ಜಿ. ರವಿ ಕುಮಾರ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿನಯ್ ಬಿದಿರೆ ಹಾಗೂ ಮೈಸೂರಿನ ರಾಜೇಂದ್ರ ನವೆಂಬರ್ 6ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲು ಆಗಮಿಸಿದ್ದು, ಈ ಸಂದರ್ಭದಲ್ಲಿ ದಾರಿ ಮಧ್ಯೆ ಬೆಳ್ತಂಗಡಿಯಲ್ಲಿರುವ ಶಾಸಕ ಹರೀಶ್ ಪೂಂಜಾರ ಕಛೇರಿ ‘ಶ್ರಮಿಕ’ ಕ್ಕೆ ಭೇಟಿ ನೀಡಿದರು.ಪಕ್ಷದ ಪ್ರಮುಖರನ್ನು ತನ್ನ ಕಛೇರಿಗೆ ಆತ್ಮೀಯವಾಗಿ ಬರಮಾಡಿಕೊಂಡ ಶಾಸಕ ಹರೀಶ್ ಪೂಂಜಾ; ಆದರದಿಂದ ಗೌರವಿಸಿ, ಪ್ರೀತಿಯಿಂದ ಬೀಳ್ಕೊಟ್ಟರು. ಬೆಳ್ತಂಗಡಿ ಮಂಡಲ ಬಿಜೆಪಿಯ ವಿವಿಧ ಪದಾಧಿಕಾರಿಗಳು ಹಾಗೂ ಪ್ರಮುಖರು ಹಾಜರಿದ್ದರು.






