ಬಳಂಜ ಬಿಲ್ಲವ ಸಂಘದ ವಾರ್ಷಿಕ ಮಹಾಸಭೆ

ಬಳಂಜ ಬಿಲ್ಲವ ಸಂಘದ ವಾರ್ಷಿಕ ಮಹಾಸಭೆ
Facebook
Twitter
LinkedIn
WhatsApp

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ ನಾಲ್ಕೂರು ತೆಂಕಕಾರಂದೂರು ಇದರ 2019-20 ನೇ ಸಾಲಿನ ವಾರ್ಷಿಕ ಮಹಾಸಭೆಯು ಬಳಂಜದ ಸಂಘದ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್. ಎಸ್.ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಂಘದ ಗೌರವಧ್ಯಕ್ಷ ಹೆಚ್. ಧರ್ಣಪ್ಪ ಪೂಜಾರಿ, ಕಾರ್ಯದರ್ಶಿ ಯೋಗೀಶ್ ಆರ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಜಗದೀಶ್ ಬಳ್ಳಿದಡ್ಡ, ಕೋಶಾಧಿಕಾರಿ ದಿನೇಶ್ ಪೂಜಾರಿ ಅಂತರ, ಮಹಿಳಾ ಬಿಲ್ಲವ ವೇದಿಕೆ ಕಾರ್ಯದರ್ಶಿ ಅನುಶ್ರೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇತ್ತೀಚೆಗೆ ಸ್ವರ್ಗಸ್ಥರಾದ ಬಿಲ್ಲವ ಸಮಾಜದ ಹಿರಿಯ ನಾಯಕರೂ ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷರೂ ಆದ ಜಯ ಸಿ. ಸುವರ್ಣ ಮತ್ತು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷರಾದ ಉದ್ಯಮಿ ರಮಾನಂದ ಸಾಲಿಯಾನ್‌ರಿಗೆ ಸಭೆಯಲ್ಲಿ ನುಡಿನಮನ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಮಾಜಿ ಅಧ್ಯಕ್ಷರುಗಳು, ಪಧಾಧಿಕಾರಿಗಳು ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಸ್ವಾಗತಿಸಿ, ಸದಸ್ಯ ಜಗದೀಶ್ ವರದಿ ಮಂಡಿಸಿದರು.

Latest News

Related Posts