ಡಾ. ಡಿ. ವೀರೇಂದ್ರ ಹೆಗ್ಗಡೆಯವರ 73ನೇ ಹುಟ್ಟುಹಬ್ಬ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 73ನೇ ಹುಟ್ಟುಹಬ್ಬ
Facebook
Twitter
LinkedIn
WhatsApp

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 73 ನೇ ಹುಟ್ಟುಹಬ್ಬದ ಸಂದರ್ಭ ನಾಡಿನ ಗಣ್ಯರು, ಅಭಿಮಾನಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ, ಡಾ. ಹೆಗ್ಗಡೆಯವರಿಗೆ ಶುಭ ಹಾರೈಸಿದರು. ಧರ್ಮಾಧಿಕಾರಿ‌ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿ ಹಾಗೂ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಹೆಗ್ಗಡೆಯವರ ಕುಟುಂಬಸ್ಥರು ಜೊತೆಗಿದ್ದರು. ಡಾ.ಹೆಗ್ಗಡೆಯವರ ಹುಟ್ಟು ಹಬ್ಬದ ಸಂದರ್ಭ ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರ ಕಲ್ಪನೆಯಂತೆ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜನ ಜಾಗೃತಿ ವೇದಿಕೆ ಮೂಲಕ ಸಮಾಜದಲ್ಲಿರುವ ಬಡವರಿಗೆ, ನೊಂದವರಿಗೆ, ವಿಶೇಷ ಚೇತನರಿಗೆ ನೆರವು ನೀಡುವ ಕಾರ್ಯಕ್ರಮ ವಾತ್ಸಲ್ಯ ಯೋಜನೆಗೆ ಸರಳ ಕಾರ್ಯಕ್ರಮ ನಡೆಸಿ ಚಾಲನೆ ನೀಡಲಾಯಿತು. ಹೆಗ್ಗಡೆಯವರ 73ನೇ ಹುಟ್ಟುಹಬ್ಬ ಆಚರಿಸುವ ಸಂದರ್ಭ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಾಜಿ ಶಾಸಕ ಪ್ರಭಾಕರ ಬಂಗೇರ, ದಕ್ಷಿಣ ಕನ್ನಡ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್. ಡಿ. ಸಾಮ್ರಾಜ್ಯ, ಬೈಂದೂರಿನ ಮಾಜಿ ಶಾಸಕ ಅಪ್ಪಣ್ಣ ಹೆಗ್ಟ ಬೈಂದೂರು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್. ಎಚ್. ಮಂಜುನಾಥ್, ಸಿರಿ ಗ್ರಾಮೋದ್ಯೋಗ ಸಂಸ್ಥೆ ಮ್ಯಾನೇಜಿಂಗ್ ಡೈರೆಕ್ಟರ್ ಕೆ. ಎನ್. ಜನಾರ್ಧನ್, ಉಜಿರೆ ರುಡ್‌ಸೆಟ್‌ನ ಕಾರ್ಯನಿರ್ವಹಣಾಧಿಕಾರಿ ಜನಾರ್ದನ್, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ, ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ವಿ. ರಾಮಸ್ವಾಮಿ, ಸ್ಥಾಪಕಾಧ್ಯಕ್ಷ ವಸಂತ ಸಾಲಿಯಾನ್, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಪ್ರಿನ್ಸಿಪಾಲ್‌ಗಳು, ಪ್ರಾಧ್ಯಾಪಕರುಗಳು, ಸಿಬ್ಬಂದಿಗಳು, ಗ್ರಾಮಾಭಿವೃದ್ದಿ ಯೋಜನೆಯ ಪ್ರಾದೇಶಿಕ ನಿರ್ದೇಶಕರುಗಳು, ಯೋಜನಾಧಿಕಾರಿಗಳು, ಸಿಬ್ಬಂದಿಗಳು, ದೇವಳದ ಸಿಬ್ಬಂದಿಗಳು, ನಾಡಿನ ಗಣ್ಯರು, ಅಭಿಮಾನಿಗಳು, ಊರವರು ಶುಭ ಹಾರೈಸಿದರು.

Latest News

Related Posts