ಕೋವಿಡ್ ಕೇರ್ ಸೆಂಟರ್‌ನ ಸಿದ್ಧತೆ ಪರಿಶೀಲನೆ

ಕೋವಿಡ್ ಕೇರ್ ಸೆಂಟರ್‌ನ ಸಿದ್ಧತೆ ಪರಿಶೀಲನೆ
Facebook
Twitter
LinkedIn
WhatsApp

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸುಪರ್ದಿಯಲ್ಲಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ‌ ಮತ್ತು ಸಂಶೋಧನಾ ಕೇಂದ್ರದಲ್ಲಿ ಆರಂಭಿಸಲಾಗುವ ವಿಶೇಷ ಕೋವಿಡ್ ಕೇರ್ ಸೆಂಟರ್‌ನ ಸಿದ್ಧತೆಯನ್ನು ಎಪ್ರಿಲ್ 29ರಂದು ಪರಿಶೀಲಿಸಿದ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ, ವ್ಯವಸ್ಥೆಯ ದೃಷ್ಟಿಯಿಂದ ಸೂಕ್ತ ಸಲಹೆ-ಸೂಚನೆ ನೀಡಿದರು.ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಸಿದ್ಧವಾಗುತ್ತಿರುವ ಈ ವಿಶೇಷ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂಪೂರ್ಣ ಸಹಕಾರ ನೀಡಿದ್ದು, ಶಾಸಕ ಹರೀಶ್ ಪೂಂಜ ಈ ಸಂದರ್ಭದಲ್ಲಿ ಡಾ. ಹೆಗ್ಗಡೆಯವರಿಗೆ ತಾಲೂಕಿನ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸಿದರು. ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿ ಡಾl ಕಲಾಮಧು ಶೆಟ್ಟಿ, ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ‌ ಡಾl ವಿದ್ಯಾಲಕ್ಷ್ಮಿ ಸಹಿತ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. *ಶಾಸಕ ಹರೀಶ್ ಪೂಂಜ ಸಹಿತ ಆರೋಗ್ಯ ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರು ಮಾಸ್ಕ್ ಸರಿಯಾಗಿ ಧರಿಸಿ, ವೈಯಕ್ತಿಕ ಅಂತರ ಸರಿಯಾಗಿ ಕಾಪಾಡುವ ಮೂಲಕ ಕೋವಿಡ್ ಮುಂಜಾಗ್ರತಾ ನಿಯಮವನ್ನು ಸರಿಯಾಗಿ ಪಾಲಿಸಿ ಭಾಗವಹಿಸಿದ ಅಪೂರ್ವ ಸಂದರ್ಭದ ಸಂಗ್ರಹಯೋಗ್ಯ ಫೊಟೊ ಓದುಗರಿಗಾಗಿ ನೀಡಿದ್ದೇವೆ.*

Latest News

Related Posts