ಕೋವಿಡ್ ಕಾರ್ಯಪಡೆಯ ಕೆಲಸ ಪರಿಶೀಲನೆ

ಕೋವಿಡ್ ಕಾರ್ಯಪಡೆಯ ಕೆಲಸ ಪರಿಶೀಲನೆ
Facebook
Twitter
LinkedIn
WhatsApp

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮಗಳು ಹಾಗೂ ಕೋವಿಡ್ ಕಾರ್ಯಪಡೆಯ ಕೆಲಸ ಪರಿಶೀಲನೆ ಬಗ್ಗೆ ಸಮಾಲೋಚನಾ ಸಭೆ ಮೇ 14ರಂದು ಧರ್ಮಸ್ಥಳ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬೆಳಂಗಡಿ ತಹಶೀಲ್ದಾರ್ ಮಹೇಶ್ ಜೆ.ಯವರ ನಡೆಯಿತು.ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚುತ್ತಿದ್ದು, ಸೋಂಕಿತರ ಚಿಕಿತ್ಸೆಗೆ ಬೆಡ್‌ಗಳ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಧರ್ಮಸ್ಥಳದ ರಜತಾದ್ರಿ ಸಭಾಭವನವನ್ನು ಉಪಯೋಗಿಸುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಸಲಹೆ ನೀಡಿದ್ದು, ಈ ಹಿನ್ನೆಲೆಯಲ್ಲಿ ತಾಲೂಕು ಆಡಳಿತದಿಂದ ಅಲ್ಲಿ ಚಿಕಿತ್ಸೆಗಾಗಿ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಕೊರೋನಾ ಕೇರ್ ಸೆಂಟರ್ ಆರಂಭಿಸುವಾಗ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಾ ಮೋನಪ್ಪ ಗೌಡ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ತಾಲೂಕು ಆರೋಗ್ಯಾಧಿಕಾರಿ ಡಾl ಕಲಾಮಧು, ನೋಡೆಲ್ ಅಧಿಕಾರಿ ಡಾ. ಜಯಕೀರ್ತಿ, ಉಪನೋಡೆಲ್ ಅಧಿಕಾರಿ ಹಾಗೂ ಕಂದಾಯ ನಿರೀಕ್ಷಕ ಪಾವಡಪ್ಪ ದೊಡಮನಿ, ಶ್ರೀ ಧರ್ಮಸ್ಥಳ ಕ್ಷೇತ್ರದ ವ್ಯವಸ್ಥಾಪಕ ಪಾರ್ಶ್ವನಾಥ ಜೈನ್, ಗ್ರಾಮ ಪಂಚಾಯತ್ ಸದಸ್ಯರುಗಳು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದು ಸುಕ್ತ ಸಲಹೆ ಸೂಚನೆ ನೀಡಿದರು. ಗ್ರಾಮ ಪಂಚಾಯತ್ ಸಿಬ್ಬಂದಿ ಡಾ. ದೇವಿಪ್ರಸಾದ್ ಬೊಳ್ಮ ಸ್ವಾಗತಿಸಿ, ವಂದಿಸಿದರು.

Latest News

Related Posts