ಸಹಕಾರಿ ಸಂಘದ ಸಿಬ್ಬಂದಿಗಳನ್ನು ಕೊರೋನಾ ವಾರಿಯರ್ಸ್ ಆಗಿ ಪರಿಗಣಿಸಿ-ರಕ್ಷಿತ್

ಸಹಕಾರಿ ಸಂಘದ ಸಿಬ್ಬಂದಿಗಳನ್ನು ಕೊರೋನಾ ವಾರಿಯರ್ಸ್ ಆಗಿ ಪರಿಗಣಿಸಿ-ರಕ್ಷಿತ್
Facebook
Twitter
LinkedIn
WhatsApp

ಬೆಳ್ತಂಗಡಿ: ಕೊರೊನಾ ಸಂದರ್ಭದಲ್ಲಿಯೂ ಗ್ರಾಮೀಣ ಆರ್ಥಿಕತೆಯಲ್ಲಿ ಸಹಕಾರಿ ಸಂಘಗಳು ಮಹತ್ವದ ಪಾತ್ರವಹಿಸಿದೆ.ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕ ವ್ಯವಸ್ಥೆಗೆ ರಾಷ್ಟೀಕೃತ ಬ್ಯಾಂಕ್‌ಗಳಿಗೆ ಸರಿಸಮನಾಗಿ ಸಹಕಾರಿ ಸಂಸ್ಥೆಗಳು ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿದೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ನಮ್ಮ ಸಹಕಾರಿ ಸಂಸ್ಥೆಯ ಸಿಬ್ಬಂದಿಗಳು ಕೊರೊನಾ ವಾರಿಯರ್ಸ್ ಮಾದರಿಯಲ್ಲಿ ತಮ್ಮ ಗ್ರಾಹಕರಿಗೆ ಬ್ಯಾಂಕಿಂಗ್ ಹಾಗೂ ಪಡಿತರ ವಿತರಣೆ, ಹಾಗೂ ರೈತರಿಗೆ ತಮ್ಮ ಬೆಳೆ ಬೆಳೆಯಲು ಯಾವುದೇ ಸಮಸ್ಯೆ ಬಾರದ ರೀತಿಯಲ್ಲಿ ರಸಗೊಬ್ಬರ, ಮೈಲುತುತ್ತು ವಿತರಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆಸಹಕಾರಿ ಕ್ಷೇತ್ರದ ಸಿಬ್ಬಂದಿಗಳ ಈ ಅಮೂಲ್ಯ ಸೇವೆಯನ್ನು ಪರಿಗಣಿಸಿ ಸರಕಾರ ಆದ್ಯತೆಯ ಮೇರೆಗೆ ಕೊರೊನಾ ಲಸಿಕೆ ವಿತರಣೆ ಹಾಗೂ ಇತರ ಕೊರೊನಾ ವಾರಿಯರ್ಸ್ ಗಳ ಸೌಲಭ್ಯವನ್ನು ಸಿಬ್ಬಂದಿಗಳಿಗೆ ವಿಸ್ತರಿಸಲಿ ಎಂಬುದೇ ಸರ್ವ ಸಹಕಾರಿಗಳ ಆಶಯ ಎಂದು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಪತ್ರಿಕಾ ಹೇಳಿಕೆಯೊಂದರಲ್ಲಿ ಸರಕಾರವನ್ನು ಒತ್ತಾಯಿಸಿದ್ದಾರೆ.

Latest News

Related Posts