ಬೆಳ್ತಂಗಡಿ: ಕೋವಿಡ್-19 ಪ್ರಯುಕ್ತ ಧಾರ್ಮಿಕ ದತ್ತಿ ಇಲಾಖೆಯ ಸಮೂಹ ‘ಸಿ’ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು, ಅಡುಗೆಭಟ್ಟರು ಹಾಗೂ ಸಿಬ್ಬಂದಿಗಳಿಗೆ ತಲಾ ರೂಪಾಯಿ 3000/ ರಂತೆ ಧನ ಸಹಾಯಧನವನ್ನು ಸರಕಾರ ಘೋಷಿಸಿದೆ. ಆ ಪ್ರಯುಕ್ತ ತಾಲೂಕಿನ 40 ‘ಸಿ’ ದೇವಾಲಯಗಳ ಸುಮಾರು ನೂರಕ್ಕೂ ಹೆಚ್ಚು ಅರ್ಜಿಗಳನ್ನು ಜೂನ್ 11ರಂದು ಬೆಳ್ತಂಗಡಿಯ ‘ಶ್ರಮಿಕ’ ಶಾಸಕರ ಅಧಿಕೃತ ಕಛೇರಿಯಲ್ಲಿ ಶಾಸಕ ಹರೀಶ ಪೂಂಜ ಅವರ ಸಮ್ಮುಖದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವರಿಗೆ ಸಲ್ಲಿಸಲಾಯಿತು. ಈ ಸಂದರ್ಭ ಬಿಜಿಪಿ ಮಂಡಲಾಧ್ಯಕ್ಷ ಜಯಂತ ಕೋಟ್ಯಾನ್, ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ. ಕೆ. ಧನಂಜಯರಾವ್,ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭುವನೇಶ ಗೇರುಕಟ್ಟೆ ಹಾಗೂ ವಿವಿಧ ದೇವಾಲಯಗಳ ಅರ್ಚಕರು ಹಾಗೂ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.






