ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ವತಿಯಿಂದ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಕೊಡಮಾಡಿದ 10ಆಕ್ಸಿಮೀಟರ್‌ಗಳನ್ನು ಸಂಘದ ಅಧ್ಯಕ್ಷ ಶ್ರೀಧರ ಜಿ. ಬಿಡೆಯವರು ಜೂನ್ 11ರಂದು ಸಂಘದ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾl ವಿದ್ಯಾವತಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಅನಂತ ಭಟ್ ಎಂ., ನಿರ್ದೇಶಕರುಗಳಾದ ಬಾಲಕೃಷ್ಣ ಗೌಡ ಕೆ., ವಿ. ವಿ. ಅಬ್ರಾಹಂ, ಬೈರಪ್ಪ ಹಾಗೂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಜು ಶೆಟ್ಟಿ ಉಪಸ್ಥಿತರಿದ್ದರು.






