ಬೆಳ್ತಂಗಡಿ: ಉಜಿರೆಯ ಬೆಳಕು ಸೇವಾ ಪ್ರತಿಷ್ಠಾನದ ವತಿಯಿಂದ ಕಲ್ಮಂಜ ಗ್ರಾಮದ ಆಶಾ ಕಾರ್ಯಕರ್ತೆಯರಿಗೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಆಹಾರ ಧಾನ್ಯದ ಕಿಟ್ ಮತ್ತು ಗೌರವ ಧನವನ್ನು ಕಲ್ಮಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜೂನ್ 14ರಂದು ನಡೆದ ಸರಳ ಕಾರ್ಯಕ್ರಮದಲ್ಲಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕಲ್ಮಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ್ ಎಂ. ಕಲ್ಮಂಜ, ಬೆಳ್ತಂಗಡಿ ತಾಲೂಕು ಪಂಚಾಯತ್ನ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ರ ಶಶೀಧರ್ ಎಂ. ಕಲ್ಮಂಜ, ಪಂಚಾಯತ್ ಸದಸ್ಯ ಹಾಗೂ ಸಮಾಜ ಸೇವಕ ವರದಾಕ್ಷ ಆಚಾರ್ಯ, ಸವಿತಾ, ಬೆಳಕು ತಂಡದ ಪ್ರಮುಖರಾದ ಸಂಪತ್ ಸುವರ್ಣ, ಪದ್ಮನಾಭ ಶೆಟ್ಟಿಗಾರ್, ಪ್ರಶಾಂತ್ ಜೈನ್, ಬಾಲಕೃಷ್ಣ ಶೆಟ್ಟಿ, ರಾಘವ್ ಕಲ್ಮಂಜ, ಹಾಗೂ ಟಾಸ್ಕ್ ಫೋರ್ಸ್ನ ಸದಸ್ಯರಾದ ರಾಘವೇಂದ್ರ ಹುಂಕ್ರೂಟ್, ಕುಮಾರನಾಥ ಶೆಟ್ಟಿ, ಪುರುಷೋತ್ತಮ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು






