ಬೆಸ್ಟ್ ಫೌಂಡೇಶನ್‌ನಿಂದ ಆಹಾರ ಕಿಟ್ ವಿತರಣೆ

ಬೆಸ್ಟ್ ಫೌಂಡೇಶನ್‌ನಿಂದ ಆಹಾರ ಕಿಟ್ ವಿತರಣೆ
Facebook
Twitter
LinkedIn
WhatsApp

ಬೆಳ್ತಂಗಡಿ: ಬೆಸ್ಟ್ ಫೌಂಡೇಷನ್ ಬೆಂಗಳೂರು ಹಾಗೂ ತಾಲೂಕು ಯುವ ಕಾಂಗ್ರೆಸ್ ಸಹಭಾಗಿತ್ವದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಆದಿವಾಸಿಗಳಿಗೆ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಲಾಯಿಲ ಶ್ರೀ ರಾಘವೇಂದ ಮಠದ ಸಭಾಭವನದಲ್ಲಿ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ  ಮಾಜಿ ಶಾಸಕ ಕೆ‌. ವಸಂತ ಬಂಗೇರ, ಜನರು ಸಂಕಷ್ಟದಲಿರುವ ಈ ಸಂದರ್ಭದಲ್ಲಿ ಅವರ ನೆರವಿಗೆ ನಿಲ್ಲುವ ಕಾರ್ಯವನ್ನು ಎಲರೂ ಮಾಡಬೇಕಾಗಿದೆ. ಇದೀಗ ಜನರಿಗೆ ನೆರವಾಗುವ ಕಾರ್ಯಕ್ರಮಕ್ಕೆ ಯುವಕರ ತಂಡ ಮುಂದಾಗಿದ್ದು ಇದು ಉತ್ತಮ ಕಾರ್ಯವಾಗಿದೆ ಎಂದರು. ಹೊಸಮಾರು ಬಲ್ಯೊಟ್ಟು ಮಠದ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರು ಬಡಕುಟುಂಬಗಳಿಗೆ ಆಹಾರದ ಕಿಟ್ ಹಸ್ತಾಂತರಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬೆಸ್ಟ್ ಫೌಂಡೇಷನ್‌ನ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.ಆಹಾರ ಕಿಟ್ ವಿತರಣೆಗೆ ನೇತೃತ್ವ ವಹಿಸಿದ್ದ ಬೆಸ್ಟ್ ಫೌಂಡೇಶನ್ ಮುಖಂಡ ಹಾಗೂ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡಿ, ಬೆಂಗಳೂರಿನಲ್ಲಿ ಕೋವಿಡ್ ಸಂದರ್ಭದಲ್ಲಿ ಜನರ ಸೇವಾ ಕಾರ್ಯವನ್ನು ವಿವಿಧ ರೀತಿಯಲ್ಲಿ ಮಾಡುತ್ತಾ ಬಂದಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಆದಿವಾಸಿಗಳಿಗೆ ಹಾಗೂ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗುವ ಕಾರ್ಯಕ್ಕೆ ಮುಂದಾಗಿರುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆ,  ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿಯ ವಕ್ತಾರರು ಹಾಗೂ ಸಾಮಾಜಿಕ ಜಾಲತಾಣದ ಕೋ ಆರ್ಡಿನೇಟರ್‌ಗಳಾದ ಲಾವಣ್ಯ ಬಲ್ಲಾಳ್, ರಾಜ್ಯ ಕಾಂಗ್ರೆಸ್ ಕಾರ್ಯದರ್ಶಿ ರಾಹುಲ್ ಮನೋಜ್ ಕುಮಾರ್, ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ, ಪ್ರಮುಖರಾದ ಪವನ್ ಕುಮಾರ್, ಪ್ರಭಾಕರ ಶಾಂತಿಕೋಡಿ, ನವೀನ್ ಗೌಡ, ಶೇಖರ ಬಂಗೇರ, ಅನೂಪ್ ಬಂಗೇರ, ಸಂದೀಪ್ ನೀರಲ್ಕೆ, ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರಾದ ಸದಸ್ಯರಾದ ಜಗದೀಶ್ ಡಿ. ಹಾಗೂ ಜನಾರ್ದನ, ಸಲೀಂ ಗುರುವಾಯನಕೆರೆ, ಬಿ. ಕೆ. ವಸಂತ್, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಭಿನಂದನ್ ಹರೀಶ್, ತಾಲೂಕು ಮಹಿಳಾ ಕಾಂಗ್ರೆಸ್ ಮುಖಂಡೆ ಉಷಾ ಶರತ್, ದಯಾನಂದ ಬೆಳಾಲು ಮೊದಲಾದವರು ಉಪಸ್ಥಿತರಿದ್ದರು.ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಹಲವಾರು ಬಡಕುಟುಂಬಗಳು, ವಿಶೇಷವಾಗಿ ಮಲೆಕುಡಿಯ ಹಾಗೂ ಕೊರಗ ಸಮುದಾಯಗಳ ಜೊತೆಗೆ ಕೆಲಸಮಾಡುವ ಸಾಮಾಜಿಕ ಕಾರ್ಯಕರ್ತರು ಕರೆ ಮಾಡಿ ಸಹಾಯ ಮಾಡುವಂತೆ ಮನವಿಯನ್ನು ನೀಡಿದ್ದು, ಈ ನಿಟ್ಟಿನಲ್ಲಿ ಬೆಸ್ಟ್ ಫೌಂಡೇಷನ್ ಬೆಂಗಳೂರು ಹಾಗೂ ಬೆಳ್ತಂಗಡಿ ಯುವ ಕಾಂಗ್ರೆಸ್ ಜೊತೆಗೂಡಿ ಬೆಳ್ತಂಗಡಿ ತಾಲೂಕಿನಲ್ಲಿ ತುಂಬಾ ಕಷ್ಟದಲ್ಲಿರುವ ಹಾಗೂ ಕೋವಿಡ್ ಸಂತ್ರಸ್ತರಿಗೆ ಸಹಾಯ ಮಾಡುವ ಉದ್ದೇಶದಿಂದ ಈ ರೇಷನ್ ಕಿಟ್ ವಿತರಣಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಕ್ಷಿತ್ ಶಿವರಾಮ್ ತಿಳಿಸಿದರು.

Latest News

Related Posts