ಬೆಳ್ತಂಗಡಿ: ಸೀಲ್ಡೌನ್ ಆಗಿರುವ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಹಾಗೂ ವರ್ತಕರಿಗೆ ಗ್ರಾಮ ಪಂಚಾಯತಿ ಮತ್ತು ಆರೋಗ್ಯ ಇಲಾಖೆ ವತಿಯಿಂದ ಕೋವಿಡ್ ಪರೀಕ್ಷೆ ಜೂನ್ 18ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬಳಿಯ ಕೃಷ್ಣಾನುಗ್ರಹ ಸಭಾ ಭವನದಲ್ಲಿ ನಡೆಯಿತು. ಉಜಿರೆಯ ಹಿರಿಯರಾದ ವಸಂತಿ ಗೌಡ ಮತ್ತು ಜಯರಾಮ ಪಡ್ಡಿಲ್ಲಾಯ ಅವರಿಗೆ ಕೋವಿಡ್ ಪರೀಕ್ಷೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ವಿಧಾನ ಪರಿಷತ್ ಸದಸ್ಯ ಪ್ರತಾಪ್ಸಿಂಹ ನಾಯಕ್, ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ತಾಲೂಕು ವೈದ್ಯಾಧಿಕಾರಿ ಡಾl ಕಲಾಮಧು, ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾl ಅಕ್ಷತಾ ರಾಜ್, ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯ, ಬದುಕು ಕಟ್ಟೋಣ ತಂಡದ ಸಂಚಾಲಕ ಕೆ. ಮೋಹನ್ ಕುಮಾರ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ, ಉಪಾಧ್ಯಕ್ಷ ರವಿಕುಮಾರ್ ಬರೆಮೇಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಕಾರ್ಯದರ್ಶಿ ಜಯಂತ್ ಯು. ಬಿ., ಪಂಚಾಯಿತ್ ಸದಸ್ಯರು, ಉಜಿರೆ ವರ್ತಕರ ಸಂಘದ ಪದಾಧಿಕಾರಿಗಳು, ರೋಟರಿ ಕ್ಲಬ್, ಬದುಕು ಕಟ್ಟೋಣ ತಂಡದ ಸದಸ್ಯರು ಉಪಸ್ಥಿತರಿದ್ದರು. ಅರೋಗ್ಯ ಸಹಾಯಕಿ ಸುಜಾತ, ವೈದ್ಯಾಧಿಕಾರಿಗಳ ತಂಡ, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.







