ಬೆಳ್ತಂಗಡಿ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ‘ಎಲ್ಲರಿಗೂ ಲಸಿಕೆ, ಎಲ್ಲರಿಗೂ ಉಚಿತ’ ವಿಶ್ವದ ಅತಿ ದೊಡ್ಡ ಉಚಿತ ಲಸಿಕಾ ಅಭಿಯಾನ ಜೂನ್ 21ರ ವಿಶ್ವ ಯೋಗದಿನದಂದು ದೇಶದಾದ್ಯಂತ ನಡೆಯುತ್ತಿದ್ದು, ಬೆಳ್ತಂಗಡಿ ತಾಲೂಕು ಆರೋಗ್ಯ ಕೇಂದ್ರದ ವತಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆದ ಕೋವಿಡ್ ಲಸಿಕಾ ಅಭಿಯಾನಕ್ಕೆ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು.ಬೆಳ್ತಂಗಡಿ ತಾಲೂಕು ವೈದ್ಯಾಧಿಕಾರಿ ಡಾl ಕಲಾಮಧು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾl ವಿದ್ಯಾವತಿ, ಕ್ಷೇತ್ರ ಶಿಕ್ಷಣ ಸಂಯೋಜಕ ಸುಭಾಷ್ ಜಾದವ್, ತಾಲೂಕು ಪ್ರೌಢ ಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್ ಮಯ್ಯ, ಕಾರ್ಯದರ್ಶಿ ರಿಯಾಜ್ ಅಹಮ್ಮದ್ ಮತ್ತಿತರರು ಉಪಸ್ಥಿತರಿದ್ದರು.






