ಡಾ. ಶ್ಯಾಮ್‌ಪ್ರಸಾದ್ ಮುಖರ್ಜಿ ಪುಣ್ಯತಿಥಿ

ಡಾ. ಶ್ಯಾಮ್‌ಪ್ರಸಾದ್ ಮುಖರ್ಜಿ ಪುಣ್ಯತಿಥಿ
Facebook
Twitter
LinkedIn
WhatsApp

ಬೆಳ್ತಂಗಡಿ: ಸ್ವತಂತ್ರ ಭಾರತದ ಮೊತ್ತಮೊದಲ ಸರ್ವಪಕ್ಷ ಸರಕಾರದಲ್ಲಿ ಕೈಗಾರಿಕಾ ಸಚಿವರಾಗಿದ್ದ ಭಾರತದ ಏಕತೆಗೆ ಶ್ರಮಿಸಿದ ಮಹಾನ್ ನಾಯಕ ಡಾ. ಶ್ಯಾಮ್‌ಪ್ರಸಾದ್ ಮುಖರ್ಜಿಯವರ ಪುಣ್ಯತಿಥಿಯನ್ನು ಜೂನ್ 23ರಂದು ಬೆಳ್ತಂಗಡಿ ಮಂಡಲ ಬಿಜೆಪಿ ಕಛೇರಿಯಲ್ಲಿ ಆಚರಿಸಲಾಯಿತು. ಡಾ. ಶ್ಯಾಮ್‌ಪ್ರಸಾದ್ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು. ಬಳಿಕ ಸಸಿ ನೆಡುವ ಮೂಲಕವೃಕ್ಷಾರೋಪಣ ಮಾಡಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಲಾಯಿತು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ‌ ಮಂಡಲ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಧರ್ಮಸ್ಥಳ, ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಸದಸ್ಯ ಶರತ್ ಶೆಟ್ಟಿ, ಪ್ರಮುಖರಾದ ಸೀತಾರಾಮ್ ಮತ್ತಿತರರು ಉಪಸ್ಥಿತರಿದ್ದರು.

Latest News

Related Posts