ಅಂಬ್ಯುಲೆನ್ಸ್ ನಲ್ಲಿ ಮಹಿಳೆ ಹೆರಿಗೆ

ಅಂಬ್ಯುಲೆನ್ಸ್ ನಲ್ಲಿ ಮಹಿಳೆ ಹೆರಿಗೆ
Facebook
Twitter
LinkedIn
WhatsApp

ಬೆಳ್ತಂಗಡಿ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ 108 ಅಂಬುಲೆನ್ಸ್‌ನಲ್ಲೇ ಹೆರಿಗೆಯಾದ ಘಟನೆ ಜೂನ್ 25ರಂದು ವರದಿಯಾಗಿದೆ.
ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಮಜಲಡ್ಡ ನಿವಾಸಿ ಲಲಿತ (38) ಅಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದವರು. ಹೆರಿಗೆ ನೋವಿನಿಂದ ಬಳಲುತ್ತಿದ್ದ ಇವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಡಂತ್ಯಾರು ಸಮೀಪಿಸುತ್ತಿದ್ದಂತೆ ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣ ಕಾರ್ಯಪ್ರವೃತ್ತರಾದ ಶುಶ್ರೂಷಕಿ ವಿಲ್ಮಾ ಹಾಗೂ ವಾಹನ ಚಾಲಕ ಗಿರೀಶ್‌ರವರ ಸಹಾಯದಿಂದ ಅಂಬುಲೆನ್ಸ್ ನ ಒಳಗೆ ಹೆರಿಗೆ ಮಾಡಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ತಾಯಿ ಮಗು ಆರೋಗ್ಯವಾಗಿದ್ದು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Latest News

Related Posts