ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕೋವಿಡ್ ವ್ಯಾಕ್ಸಿನೇಷನ್ ನೀಡುವ ಕಾರ್ಯಕ್ರಮವು ಜೂನ್ 29ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರೂ ಆಗಿರುವ ಮಾಜಿ ಶಾಸಕ ವಸಂತ ಬಂಗೇರ ಉದ್ಘಾಟನೆ ನೆರವೇರಿಸಿದರು.ತಾಲೂಕು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾl ವಿದ್ಯಾವತಿ, ಕಾಲೇಜಿನ ನೋಡೆಲ್ ಅಧಿಕಾರಿ ಶಮೀವುಲ್ಲಾ, ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳಾದ ಸಂತೋಷ್, ಭವ್ಯಶ್ರೀ ಮೊದಲಾದವರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯ ಡಾ. ಪ್ರವೀಣ್ ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಧನ್ಯವಾದವಿತ್ತರು.






