ಬೆಳ್ತಂಗಡಿ: ಸರಕಾರವು ಕಟ್ಟಡ ಕಾರ್ಮಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು ಪ್ರಸ್ತುತ ಕೊರೊನಾ ಮಹಾಮಾರಿ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರಿಗೆ ಸರಕಾರ ಸುರಕ್ಷತಾ ಕಿಟ್ ನೀಡುತ್ತಿದ್ದು ಇದನ್ನು ಸಮರ್ಪಕವಾಗಿ ಬಳಸಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಮತ್ತು ಸರಕಾರದ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಬೆಳ್ತಂಗಡಿ ಸಿವಿಲ್ ಜಡ್ಜ್ ಸೀನಿಯರ್ ಡಿವಿಜನ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾದೀಶ ನಾಗೇಶ್ ಮೂರ್ತಿ ಹೇಳಿದ್ದಾರೆ.ಅವರು ಜುಲೈ 2ರಂದು ಬೆಳ್ತಂಗಡಿಯ ಕೋರ್ಟ್ ರಸ್ತೆಯ ಇಎಂಎಸ್ ಭವನದಲ್ಲಿರುವ ಕಾರ್ಮಿಕ ಸಂಘದ ಕಚೇರಿಯಲ್ಲಿ ಕಾರ್ಮಿಕ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲಾ ಕಟ್ಟಡ ಮತ್ತು ಕಾರ್ಮಿಕರ ಸಂಘ (ರಿ) ಕರ್ನಾಟಕ ರಾಜ್ಯ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನಡೆದ ಕೋವಿಡ್-19 ಸಂಕಷ್ಟದಲ್ಲಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ರಕ್ಷಣಾ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಸುರಕ್ಷತಾ ಕಿಟ್ ವಿತರಿಸಿ ಮಾತನಾಡಿದರು.ಬೆಳ್ತಂಗಡಿ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯದೀಶ ಸತೀಶ್ ಕೆ. ಜಿ. ಮಾತನಾಡಿ, ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಕೊರೊನಾ ಮಾಹಾಮಾರಿಯಿಂದ ಪಾರಾಗಲು ಅಂತರ ಕಾಪಾಡುವುದರ ಜೊತೆಗೆ ಸರಕಾರದ ನಿಯಮಗಳನ್ನು ಪಾಲಿಸಿದರೆ ಶೀಘ್ರವೇ ಕೊರೊನಾ ನಿಯಂತ್ರಿಸಬಹುದು ಎಂದರು.ದಕ್ಷಿಣ ಕನ್ನಡ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ (ರಿ) ಬೆಳ್ತಂಗಡಿ ಇದರ ಅಧ್ಯಕ್ಷ ಬಿ. ಎಂ. ಭಟ್ ಅಧ್ಯಕ್ಷತೆ ವಹಿಸಿದ್ದರು.ಸುಮಾರು 60ಮಂದಿ ಕಾರ್ಮಿಕರಿಗೆ ಕಿಟ್ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ವಸಂತ ಮರಕಡ, ದಕ್ಷಿಣ ಕನ್ನಡ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ (ರಿ) ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷ ನಾರಾಯಣ ಕೈಕಂಬ, ಕಾರ್ಯದರ್ಶಿ ರಾಮಚಂದ್ರ ಉಜಿರೆ ಮತ್ತಿತರರು ಉಪಸ್ಥಿತರಿದ್ದರು.ದೇವಕಿ ಕಳೆಂಜ ಸ್ವಾಗತಿಸಿ, ಕಾರ್ಮಿಕ ನಿರೀಕ್ಷಕ ಹರೀಶ್ ಎಸ್. ಎನ್. ವಂದಿಸಿದರು.







