ಮೂಡುಬಿದಿರೆ: ಮಾರ್ಪಾಡಿ ಗ್ರಾಮದ ಕೋಟೆಬಾಗಿಲಿನಲ್ಲಿ ಬಿಜೆಪಿ ನಗರ ಮಹಾ ಶಕ್ತಿಕೇಂದ್ರದ ವತಿಯಿಂದ ವೃಕ್ಷಾರೋಪಣ ಕಾರ್ಯಕ್ರಮವುಭಾರತೀಯ ಜನತಾ ಪಾರ್ಟಿ ಮೂಲ್ಕಿ-ಮೂಡುಬಿದಿರೆ ಮಂಡಲ, ಬಿಜೆಪಿ ಮೂಡುಬಿದಿರೆ ನಗರ ಮಹಾ ಶಕ್ತಿಕೇಂದ್ರದ ಸಹಭಾಗಿತ್ವದಲ್ಲಿ ನಡೆಯಿತು.ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ, ಭಾರತೀಯ ಜನಸಂಘದ ಸ್ಥಾಪಕ ಅಧ್ಯಕ್ಷರಾದ ಡಾಕ್ಟರ್ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸದ ಪ್ರಯುಕ್ತ ಪ್ರತಿ ಬೂತಿನಲ್ಲಿ 20 ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಆಚರಿಸಬೇಕೆಂದು ಪಕ್ಷದ ಸೂಚನೆ ಮೇರೆಗೆ ಕರೆಕೊಟ್ಟರು.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷರಾದ ರಾಧಾಕೃಷ್ಣ ರೈ ಮತ್ತು ಈಶ್ವರ ಕಟೀಲ್, ಜಿಲ್ಲಾ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಸಂತ ಅಣ್ಣಲಿಕೆ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮೇಘನಾಥ್ ಶೆಟ್ಟಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಮಂಡಲ ಕಾರ್ಯದರ್ಶಿ ಗೋಪಾಲ್ ಶೆಟ್ಟಿಗಾರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಲಕ್ಷ್ಮಣ ಪೂಜಾರಿ, ನಗರ ಕಾರ್ಯದರ್ಶಿ ಸಾತ್ವಿಕ್ ಮಲ್ಯ, ಪುರಸಭೆ ಅಧ್ಯಕ್ಷ ಪ್ರಸಾದ್ ಭಂಡಾರಿ, ಪುರಸಭಾ ಉಪಾಧ್ಯಕ್ಷೆ ಸುಜಾತ ಶಶಿಕಿರಣ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ನಾಗರಾಜ ಪೂಜಾರಿ, ಪುರಸಭಾ ಸದಸ್ಯರಾದ ನವೀನ್ ಶೆಟ್ಟಿ, ಸೌಮ್ಯ ಸಂದೀಪ್ ಶೆಟ್ಟಿ, ಜಯಶ್ರೀ ಕೇಶವ್, ಸ್ವಾತಿ ಪ್ರಭು ಹಾಗೂ ಗಿರೀಶ್ ಕುಮಾರ್, ರಾಘವ ಹೆಗ್ಡೆ, ಶಕ್ತಿಕೇಂದ್ರ ಪ್ರಮುಖ್ ವಿಜಯ್ ಕೊಡಂಗಲ್ಲು, ಯೋಜನಾ ಪ್ರಾಧಿಕಾರದ ಸದಸ್ಯರಾದ ಮಂಜುನಾಥ್ ರೈ, ಪುತ್ತಿಗೆ ಶಕ್ತಿಕೇಂದ್ರದ ಅಧ್ಯಕ್ಷ ಕಿಶೋರ್ ಕುಮಾರ್ ಹಾಗೂ ಹಿಂದು ಜಾಗರಣ ವೇದಿಕೆಯ ಪ್ರಮುಖರಾದ ಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.






