ಬೆಳ್ತಂಗಡಿ: ಡಾl ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜನ್ಮದಿನದ ಅಂಗವಾಗಿ, ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸುಮಾರು 700 ಉತ್ತಮ ಜಾತಿಯ ಹಣ್ಣು ಹಾಗೂ ಇತರ ಗಿಡಗಳನ್ನು ನೀಡಲಾಯಿತು. ಚಾರ್ಮಾಡಿ ಗ್ರಾಮ ಪಂಚಾಯಿತ್ ಅಧ್ಯಕ್ಷ ಕೆ. ವಿ. ಪ್ರಸಾದ್‌ರಿಗೆ ಈ ಗಿಡಗಳನ್ನು ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಪ್ರಕಾಶ ನಾರಾಯಣ ರಾವ್ ಸಾಂಕೇತಿಕವಾಗಿ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿಈ ಗಿಡಗಳನ್ನು ಗ್ರಾಮ ಪಂಚಾಯಿತಿಯ 10ಬೂತ್‌ಗಳಿಗೆ ಹಂಚಿಕೆ ಮಾಡಲಾಯಿತು.ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ವಿ. ಪ್ರಸಾದ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಬೆಳ್ತಂಗಡಿ ತಾಲೂಕು ಪಂಚಾಯಿತ್ ಮಾಜಿ ಸದಸ್ಯ ಕೊರಗಪ್ಪ ಗೌಡ ಮತ್ತಿತರರು ಉಪಸ್ಥಿತರಿದ್ದರು.







