ಬೆಳ್ತಂಗಡಿ: ಕಳೆಂಜದ ಕಾಯಾರ್ತಡ್ಕ ವಿಭಾಗದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಲಾಭಾಂಶ ವಿತರಣಾ ಕಾರ್ಯಕ್ರಮ ಜುಲೈ 9ರಂದು ಕಾಯರ್ತಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಶಾಲೆಯ ಮುಖ್ಯೋಪಾಧ್ಯಾಯರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಜನಜಾಗೃತಿ ವೇದಿಕೆ ಸದಸ್ಯ ವಿಜಯಕುಮಾರ್ ಲಾಭಾಂಶದ ಚೆಕ್ ಹಸ್ತಾಂತರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಜಯಕರ ಶೆಟ್ಟಿ, ಮೇಲ್ವಿಚಾರಕ ಪ್ರಶಾಂತ್, ಸೇವಾಪ್ರತಿನಿಧಿ ಜನಾರ್ದನ ಹಾಗೂ ಅರ್ಪಿತಾ, ಒಕ್ಕೂಟದ ಅಧ್ಯಕ್ಷ ಚಿನ್ನಮ್ಮ ಮತ್ತು ಕೊರಗಪ್ಪ ಗೌಡ ಉಪಸ್ಥಿತರಿದ್ದರು. ಒಟ್ಟು 46 ಸಂಘಗಳಿಗೆ 13,27,845/- ರೂಪಾಯಿ ಲಾಭಾಂಶ ವಿತರಣೆ ಮಾಡಲಾಯಿತು.







