ಬೆಳ್ತಂಗಡಿ: ಇದೇ ಜುಲೈ 2ರ ಬುಧವಾರ ಮುಸ್ಲಿಂ ಬಾಂಧವರು ಆಚರಿಸುವ ಬಕ್ರೀದ್ ಹಬ್ಬಕ್ಕೆ ಪೂರ್ವಭಾವಿಯಾಗಿ ಜುಲೈ 14ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶಾಂತಿಸಭೆ ನಡೆಯಿತು.ಈ ಸಭೆಯಲ್ಲಿ ಮಾತನಾಡಿದ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಎಂ. ಎಂ. ನಂದಕುಮಾರ್, ಅಕ್ರಮ ದನ ಸಾಗಟ ಮಾಡುವವರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು; ಹಾಗೂ ರಾತ್ರಿ ವೇಳೆಯಲ್ಲಿ ಅನಾವಶ್ಯಕವಾಗಿ ತಿರುಗಾಡುವುದು ಕಂಡು ಬಂದಲ್ಲಿ ಸೂಕ್ತ ಕಾನುನು ಕ್ರಮ ಜರುಗಿಸಲಾಗುವುದು. ಹಿಂದು ಮುಸ್ಲಿಂಮರು ಸಹೋದರತ್ವದಿಂದ ಸಹಬಾಳ್ವೆಯಿಂದ ಹಬ್ಬಗಳನ್ನು ಆಚರಿಸಬೇಕು ಎಂದು ಸಲಹೆ ನೀಡಿದರು.ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಮಾತನಾಡಿ, ಬೆಳ್ತಂಗಡಿ ತಾಲೂಕಿನಲ್ಲಿ ಕಾನೂನಿಗೆ ಎಲ್ಲರೂ ಗೌರವ ನೀಡುವುದು ಶಾಂತಿ ಪಾಲನೆ ದೃಷ್ಟಿಯಿಂದ ಅಗತ್ಯ. ಯಾವುದೇ ಅಹಿತಕರ ಘಟನೆಗಳು ಜರುಗಿದ್ದಲ್ಲಿ ತಮ್ಮ ಬೀಟ್ ಪೊಲೀಸ್ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡುವಂತೆ ಸೂಚಿಸಿದರು. ಬೆಳ್ತಂಗಡಿ ಪೊಲೀಸ್ ಠಾಣಾ ಸಿಬ್ಬಂದಿವರ್ಗ ಮತ್ತು ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿನ ಹಿಂದೂ ಮುಸ್ಲಿಂ ಕ್ರಿಸ್ತ ಬಾಂದವರು ಸಭೆಯಲ್ಲಿ ಭಾಗವಹಿಸಿದ್ದರು. ಬೆಳ್ತಂಗಡಿ ಪೊಲೀಸ್ ಠಾಣೆಯ ಎಎಸ್ಐ ರಾಮಯ್ಯ ಹೆಗ್ಡೆ ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು.






