ಎನ್ಎಸ್ಎಸ್ ದಿನಾಚರಣೆ ಹಾಗೂ ಕೋವಿಡ್ ಲಸಿಕಾ ಅಭಿಯಾನ

ಎನ್ಎಸ್ಎಸ್ ದಿನಾಚರಣೆ ಹಾಗೂ ಕೋವಿಡ್ ಲಸಿಕಾ ಅಭಿಯಾನ
Facebook
Twitter
LinkedIn
WhatsApp

ಬೆಳ್ತಂಗಡಿ: ಸೇಕ್ರೆಡ್ ಹಾರ್ಟ್ ಕಾಲೇಜ್ ಮಡಂತ್ಯಾರಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಸೆಪ್ಟೆಂಬರ್ 24ರಂದು ಎನ್ಎಸ್ಎಸ್ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಅಲೆಕ್ಸ್ ಐವನ್ ಸಿಕ್ವೇರಾ ಅವರು ಭಾಗವಹಿಸಿ, ಎನ್ಎಸ್ಎಸ್ ನಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ಹೇಗೆ ತೊಡಗಿಸಿಕೊಳ್ಳಬೇಕು ಮತ್ತು ತಮ್ಮ ವ್ಯಕ್ತಿತ್ವ ವಿಕಸನವನ್ನು ಹೇಗೆ ರೂಪಿಸಿಕೊಳ್ಳಬೇಕು ಎಂಬುದರ ಬಗ್ಗೆ ಸಂಕ್ಷಿಪ್ತ ವಿವರವನ್ನು ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಜೋಸೆಫ್ ಎನ್. ಎಮ್. ಅವರು ವಹಿಸಿ, ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಎನ್‌‌ಎಸ್‌ಎಸ್ ವಿದ್ಯಾರ್ಥಿಗಳು ಸಮರ್ಪಣಾ ಭಾವದಿಂದ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಎನ್ಎಸ್ಎಸ್ ನ ಸ್ವಯಂಸೇವಕ ಸೇವಕಿಯರು ಹಾಗೂ ಕಾಲೇಜಿನ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಹಾಜರಿದ್ದರು. ಎನ್ಎಸ್ಎಸ್‌ನ ಯೋಜನಾಧಿಕಾರಿ ಪ್ರಶಾಂತ್ ಎಂ. ಸ್ವಾಗತಿಸಿದರು. ಎನ್ಎಸ್ಎಸ್ ಘಟಕದ ಸ್ವಯಂಸೇವಕಿ ವರ್ಷ ಕಾಮತ್ ವಂದಿಸಿದರು. ಸ್ವಯಂಸೇವಕಿ ತೇಜಶ್ರೀ ಕಾರ್ಯಕ್ರಮ ನಿರೂಪಿಸಿದರು.ಸಭಾ ಕಾರ್ಯಕ್ರಮದ ನಂತರ ತಾಲೂಕು ಆರೋಗ್ಯ ಕೇಂದ್ರ ಬೆಳ್ತಂಗಡಿ ಮತ್ತು ಕಾಲೇಜಿನ ಎನ್ಎಸ್ಎಸ್‌, ಎನ್‌‌ಸಿಸಿ, ರೋವರ್ಸ್‌ ಹಾಗೂ ರೇಂಜರ್ಸ್‌, ರೆಡ್‌ ಕ್ರಾಸ್‌, ವಿದ್ಯಾರ್ಥಿ ಕ್ಷೇಮಪಾಲನ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕೋವವಿಡ್ ಲಸಿಕಾ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾಲೇಜಿನ ಸುಮಾರು 450 ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಲಸಿಕೆಯನ್ನು ಪಡೆದುಕೊಂಡರು.

Latest News

Related Posts