ಸ್ವಚ್ಛತಾ ಹಿ ಸೇವಾ ಗೌರವ ಪುರಸ್ಕಾರ ಪ್ರದಾನ

ಸ್ವಚ್ಛತಾ ಹಿ ಸೇವಾ ಗೌರವ ಪುರಸ್ಕಾರ ಪ್ರದಾನ
Facebook
Twitter
LinkedIn
WhatsApp

ಬೆಳ್ತಂಗಡಿ: ಉಜಿರೆ ಹಾಗೂ ಲಾಯ್ಲ ಗ್ರಾಮ ಪಂಚಾಯತ್‌ಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸ್ವಚ್ಛತೆಗೆ ಕೈಗೊಂಡಿರುವ ಮಹತ್ವದ ಯೋಜನೆಗಳನ್ನು ಗುರುತಿಸಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚರವರಿಗೆ ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಕೊಡಮಾಡಿದ ಗೌರವ ಪುರಸ್ಕಾರ ‘ಸ್ವಚ್ಛತಾ ಹಿ ಸೇವಾ’ವನ್ನು ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ‌ ನಡೆದ ಸಮಾರಂಭದಲ್ಲಿ ನೀಡಿ ಗೌರವಿಸಲಾಯಿತು.ಈ ಪ್ರತಿಷ್ಠಿತ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಮಾರ್ ಮತ್ತಿತರ ಗಣ್ಯರು ಭಾಗವಹಿಸಿದ್ದರು.‌

Latest News

Related Posts