ಬೆಳ್ತಂಗಡಿ: ಗ್ರಾಮ ಪಂಚಾಯತ್ ಧರ್ಮಸ್ಥಳದ ಆಶ್ರಯದಲ್ಲಿ ಅಕ್ಟೋಬರ್ 2ರ ಮಹಾತ್ಮ ಗಾಂಧೀಜಿ ಅವರ ಜಯಂತ್ಯೋತ್ಸವದ ಪ್ರಯುಕ್ತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬೆಳ್ತಂಗಡಿ, ಸ್ವಚ್ಚ್ ಭಾರತ ಮಿಷನ್ನ ಸಹಭಾಗಿತ್ವದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಸ್ವಚ್ಛ ಸಂಕೀರ್ಣ ಘಟಕದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ನೀರು ಮತ್ತು ನೈರ್ಮಲ್ಯ ಸಮಿತಿ ವಿಶೇಷ ಗ್ರಾಮಸಭೆ ಹಾಗೂ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ ಧರ್ಮಸ್ಥಳ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಜಯ ಮೋನಪ್ಪ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಧರ್ಮಸ್ಥಳ ಗ್ರಾಮ ಪಂಚಾಯಿತ್ ಸ್ವಚ್ಛ ಸಂಕೀರ್ಣ ಘಟಕದಲ್ಲಿ ತಯಾರಾದ, ಕೇಂದ್ರೀಯ ತೋಟಗಾರಿಕಾ ಸಂಶೋಧನಾ ಕೇಂದ್ರ ಇವರಿಂದ ಪರೀಕ್ಷೆ ನಡೆಸಲಾದ ಕೃಷಿಗೆ ಉತ್ತಮ ಗುಣಮಟ್ಟದ ‘ಸಮೃದ್ಧಿ’ ಸಾವಯವ ಗೊಬ್ಬರ ವನ್ನು ಇದೇ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ದೀಪ ಬೆಳಗಿಸಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾಂಜಲಿಯನ್ನು ಅರ್ಪಿಸುವ ಮೂಲಕ ಗಾಂಧೀ ಜಯಂತಿಯನ್ನು ಆಚರಣೆ ಮಾಡಲಾಯಿತು. ಘನತ್ಯಾಜ್ಯ ವಿಲೇವಾರಿಯ ಕುರಿತು. ‘ಸ್ವಚ್ಛ ಆರೋಗ್ಯ ಪರಿಸರಕ್ಕೆ ನಿಮ್ಮ ಸಹಕಾರ ಕೋರಿಕೆ’ ಎಂಬ ಕರಪತ್ರವನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪಿ. ಶ್ರೀನಿವಾಸರಾವ್ ಬಿಡುಗಡೆಗೊಳಿಸಿದರು. ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನೂರು ದಿನಗಳ ಸೋಕ್ ಪಿಟ್ ಅಭಿಯಾನಕ್ಕೆ ಅಶೋಕನಗರ ದಿನೇಶ್ ಇವರ ಮನೆಯಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯ ಮೋನಪ್ಪ ಗೌಡ ಚಾಲನೆ ನೀಡಿದರು. ಮನೆಯ ಸುತ್ತ ಪರಿಸರವನ್ನು ಸ್ವಚ್ಛವಾಗಿಡಿಸಿಕೊಳ್ಳುವ ನಿಟ್ಟಿನಲ್ಲಿ ಪೈಪ್ ಕಾಂಪೋಸ್ಟ್ ಮಾಡುವವರಿಗೆ ಗ್ರಾಮ ಪಂಚಾಯಿತಿನಿಂದ ಉಚಿತವಾಗಿ ಪೈಪ್ ನೀಡುವ ಬಗ್ಗೆ ಘೋಷಣೆ ಮಾಡಲಾಯಿತು. ಧರ್ಮಸ್ಥಳ ಗ್ರಾಮ ಪಂಚಾಯಿತಿನ ಸ್ವಚ್ಛ ವಾಹಿನಿ ಚಾಲಕರಾದ ಶೇಖರಗೌಡ, ಸ್ವಚ್ಛತಾ ನೌಕರರಾದ ದಿನೇಶ್ ಇವರನ್ನು ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಮುರಳಿ ದಾಸ್, ರಾಮಚಂದ್ರ ರಾವ್, ದಿನೇಶ್, ಹರ್ಷಿತ್ ಜೈನ್, ರವಿಕುಮಾರ್, ವಸಂತ ನಾಯ್ಕ, ಸುಧಾಕರ, ಕಿಶೋರ್ ಭಂಡಾರಿ, ಸುನೀತಾ, ಲಕ್ಷ್ಮಿ, ದಯಾಳಿನಿ, ವಸಂತಿ, ರೀನಾ, ಶರ್ಮಿಳಾ ಜೈನ್, ಪಂಚಾಯಿತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ., ಕಾರ್ಯದರ್ಶಿ ವೆಂಕಪ್ಪಗೌಡ, ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಹರಿದಾಸ್ ಗಾಂಭೀರ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಧನಲಕ್ಷ್ಮಿ ಜನಾರ್ಧನ್, ನಿವೃತ್ತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರತ್ನರಾಜ ಹೆಗ್ಡೆ, ತಾಲೂಕು ಪಂಚಾಯಿತ್ ಸದಸ್ಯ ರತ್ನವರ್ಮ ಜೈನ್, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ, ಸ್ವಸಹಾಯ ಸಂಘಗಳ ಪದಾಧಿಕಾರಿಗಳು, ವಿವಿಧ ಸಂಘಸಂಸ್ಥೆಗಳ ಮುಖಂಡರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.






