ಬೆಳ್ತಂಗಡಿ: ಸೇಕ್ರೆಡ್ ಹಾರ್ಟ್ ಕಾಲೇಜ್ ಮಡಂತ್ಯಾರಿನ ಬಿಸಿಯೂಟ ಯೋಜನೆಗೆ ನವೆಂಬರ್ 25ರಂದು ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ. ಎನ್. ಜೋಸೆಫ್ ಹಾಗೂ ನಿಕಟ ಪೂರ್ವ ಪ್ರಾಂಶುಪಾಲರಾದ ಪ್ರೊ. ಅಲೆಕ್ಸ್ ಐವನ್ ಸಿಕ್ವೇರಾ ವಿದ್ಯಾರ್ಥಿಗಳಿಗೆ ಊಟ ಬಡಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಸಂಯೋಜಕರದ ಪ್ರೊ. ಬೇಬಿ ಎ., ಪ್ರೊ. ಉಷಾ, ಪ್ರಾಧ್ಯಾಪಕರಾದ ಜನಾರ್ಧನ ರಾವ್, ರಾಜೇಶ್ ಶೆಟ್ಟಿ ಮತ್ತಿತರರು ಹಾಜರಿದ್ದರು ಹಲವಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಈ ಬಿಸಿಯೂಟ ಯೋಜನೆಯ ಧ್ಯೇಯೋದ್ಧೇಶಗಳ ಕುರಿತು ಪ್ರೊ. ಅಲೆಕ್ಸ್ ಐವನ್ ಸೀಕ್ವೆರಾ ಮಾತನಾಡಿದರು. ಸರಕಾರದ ಯಾವುದೇ ಆರ್ಥಿಕ ಸಹಾಯವಿಲ್ಲದೆ ನಡೆಸುತ್ತಿರುವ ಈ ಯೋಜನೆಯ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ಅವರು ಸೂಚಿಸಿದರು.






