ಬೆಳ್ತಂಗಡಿ: 2020-21ನೇ ಆರ್ಥಿಕ ವರ್ಷದಲ್ಲಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಸದಸ್ಯರೆಲ್ಲರ ಹಾಗೂ ಸಿಬ್ಬಂದಿವರ್ಗದವರ ಸಹಕಾರದಿಂದ ಉತ್ತಮ ವ್ಯವಹಾರ ನಡೆಸಿ; ಸದಸ್ಯರ ಸಾಲ ವಸೂಲಾತಿ ಸಹಿತ ಎಲ್ಲ ಕ್ಷೇತ್ರಗಳಲ್ಲಿ ಸಾಧಿಸಿದ ಉತ್ತಮ ಸಾಧನೆಯನ್ನು ಗುರುತಿಸಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಆಡಳಿತ ಮಂಡಳಿ; ಡಿಸೆಂಬರ್ 13ರಂದು ಮಂಗಳೂರಿನಲ್ಲಿ ನಡೆದ ಬ್ಯಾಂಕಿನ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ಪ್ರಸನ್ನ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಗೌಡರನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ನಿರ್ದೇಶಕರಾದ ಬಾವಂತಬೆಟ್ಟು ನಿರಂಜನ್ ಸಹಿತ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.