ಬೆಳ್ತಂಗಡಿ: ಡಿಸೆಂಬರ್ 13ರಂದು ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ 2020-21ನೇ ಆರ್ಥಿಕ ವರ್ಷದಲ್ಲಿ ಸಾಲ ವಸೂಲಾತಿ ಸಹಿತ ಎಲ್ಲ ವ್ಯವಹಾರಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವನ್ನು ಗುರುತಿಸಿ; ಸಂಘದ ನಿರ್ದೇಶಕರು, ಸರ್ವಸದಸ್ಯರು ಹಾಗೂ ಸಿಬ್ಬಂದಿವರ್ಗದವರ ಪರವಾಗಿ ಅಧ್ಯಕ್ಷ ವಸಂತ ಮಜಲು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಶಂಕರ ಭಟ್‌ರನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು. ಬ್ಯಾಂಕಿನ ನಿರ್ದೇಶಕ ಬಾವಂತಬೆಟ್ಟು ನಿರಂಜನ್ ಸಹಿತ ಸಹಕಾರಿ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.






