ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ತಾಲೂಕು, ಯುವ ಬಂಟರ ವಿಭಾಗ, ಬಂಟರ ಸಂಘ ಉಜಿರೆ ಗ್ರಾಮ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ನಿವೃತ್ತ ಗ್ರಾಮಲೆಕ್ಕಿಗ ಚಂದ್ರಮೋಹನ್ ರೈ ಸ್ಮರಣಾರ್ಥ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಉಜಿರೆ ಬೆಳಾಲು ರಸ್ತೆಯ ಅಜ್ಜರಕಲ್ಲು ಕ್ರೀಡಾಂಗಣದಲ್ಲಿ ಮಾರ್ಚ್ 20ರಂದು ನಡೆಯಿತು. ಬರೋಡಾ ತುಳು ಕೂಟದ ಅಧ್ಯಕ್ಷ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ದೀಪ ಬೆಳಗಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಾ, ಯುವಕರು ಒಟ್ಟಾಗಿ ಸೇರಿಕೊಂಡು ನಡೆಸುತ್ತಿರುವ ಈ ಕ್ರೀಡಾಕೂಟ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ವಿಭಾಗದ ಅಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯರಾಮ ಶೆಟ್ಟಿ ಪಡಂಗಡಿ, ಉಜಿರೆ ರಬ್ಬರ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ ಬೇಂಗೆತ್ಯಾರು, ಜಯರಾಮ ಶೆಟ್ಟಿ ಮುಂಡಾಡಿಗುತ್ತು, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಶೆಟ್ಟಿ, ಮಡಂತ್ಯಾರು ವರ್ತಕರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ, ರಾಧಾಕೃಷ್ಣ ಶೆಟ್ಟಿ ಅಂಬೆಟ್ಟು, ಸತೀಶ್ ರೈ ಪುಂಡಿಕ್ಕು, ಸಾರಿಕಾ ಡಿ. ಶೆಟ್ಟಿ, ವೆಂಕಟರಮಣ ಶೆಟ್ಟಿ ಉಪಸ್ಥಿತರಿದ್ದರು. ಪ್ರಶಾಂತ್ ಶೆಟ್ಟಿ ಸ್ಬಾಗತಿಸಿ, ಸುಜಯ್ ಶೆಟ್ಟಿ ವಂದಿಸಿದರು. ವಸಂತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.