ಗ್ರಾಮ ಪಂಚಾಯತ್ ಸದಸ್ಯರೊಂದಿಗೆ ಸಂವಾದ

ಗ್ರಾಮ ಪಂಚಾಯತ್ ಸದಸ್ಯರೊಂದಿಗೆ ಸಂವಾದ
Facebook
Twitter
LinkedIn
WhatsApp

ಬೆಳ್ತಂಗಡಿ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ರಾಜಕೀಯ ಶಾಸ್ತ್ರ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಜುಲೈ 12ರಂದು ಮಡಂತ್ಯಾರು ಗ್ರಾಮ ಪಂಚಾಯತಿ ಸದಸ್ಯರೊಂದಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಜೋಸೆಫ್ ಎನ್‌. ಎಂ. ವಹಿಸಿದ್ದರು. ಗ್ರಾಮ ಪಂಚಾಯತ್ ಮಡಂತ್ಯಾರಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ಮಾತನಾಡಿ, ಗ್ರಾಮ ಪಂಚಾಯಿತ್ ಎಂದರೇನು ಮತ್ತು ಸದಸ್ಯರ ಕಾರ್ಯ ಚಟುವಟಿಕೆಗಳು, ಗ್ರಾಮ ಪಂಚಾಯಿತ್ ಎದುರಿಸುತ್ತಿರುವ ಸವಾಲುಗಳು ಯಾವುದೆಲ್ಲ ಇವುಗಳ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ವಿದ್ಯಾರ್ಥಿಗಳು ಕೇಳಿದಂತಹ ಪ್ರಶ್ನೆಗಳಿಗೆ ಉತ್ತರವನ್ನೂ ಸಮರ್ಪಕವಾಗಿ ನೀಡಿದರು. ಸದಸ್ಯರಾದ ಶೈಲೇಶ್ ಪಿ. ಹೈನುಗಾರಿಕೆ ಎಂದರೇನು ಮತ್ತು ಗ್ರಾಮ ಪಂಚಾಯಿತ್‌ನಲ್ಲಿ ದೊರಕುವ ಸೌಲಭ್ಯಗಳ ಬಗ್ಗೆ ವಿವರಿಸಿದರು. ಪಂಚಾಯತ್‌ನ ಹಾಲಿ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಮಾತನಾಡಿ, ಪ್ರಸ್ತುತ ಗ್ರಾಮ ಪಂಚಾಯಿತ್ ಕೆಲಸ ಕಾರ್ಯಗಳ ಬಗ್ಗೆ ತಿಳಿಸಿದರು. ಪಂಚಾಯತ್ ಅಧ್ಯಕ್ಷೆ ಶಶಿಪ್ರಭ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮ ಆಯೋಜಿಸಿದ ಕಾಲೇಜಿನ ರಾಜಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಶ್ರೀನಾಥ್ ಬಿ. ಎಸ್. ಅತಿಥಿಗಳನ್ನು ಸ್ವಾಗತಿಸಿದರು. ಅರ್ಪಿತಾ ದ್ವಿತೀಯ ಬಿ. ಎ. ಅತಿಥಿಗಳಿಗೆ ಧನ್ಯವಾದ ಸಮರ್ಪಿಸಿದರು. ಶಾಹೀದ್ ದ್ವಿತೀಯ ಬಿ.ಎ. ಕಾರ್ಯಕ್ರಮ ನಿರೂಪಿಸಿದರು.

Latest 5

Related Posts