ಧರ್ಮಾಧಿಕಾರಿ ಡಾ. ಹೆಗ್ಗಡೆಯವರಿಗೆ ಸರಕಾರಿ ನೌಕರರ ಅಭಿನಂದನೆ

ಧರ್ಮಾಧಿಕಾರಿ ಡಾ. ಹೆಗ್ಗಡೆಯವರಿಗೆ ಸರಕಾರಿ ನೌಕರರ ಅಭಿನಂದನೆ
Facebook
Twitter
LinkedIn
WhatsApp

ಬೆಳ್ತಂಗಡಿ: ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ ಇಲಾಖೆಗಳ ಮುಖ್ಯಸ್ಥರು, ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು, ರಾಜ್ಯ ಸರಕಾರಿ ನೌಕರರ ವಿವಿದೋದ್ದೇಶ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯರು ಮತ್ತು ಸರಕಾರಿ ನೌಕರರ ವಿವಿಧ ಸಂಘಗಳ ಪದಾಧಿಕಾರಿಗಳು ಜುಲೈ 11ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಹೆಗ್ಗಡೆಯವರ ಅಧಿಕೃತ ನಿವಾಸ ಬೀಡುವಿನಲ್ಲಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಪ್ರಥ್ವಿ ಸಾನಿಕಂ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬೆಳ್ತಂಗಡಿ ತಾಲೂಕು ಶಾಖೆಯ ಗೌರವಾಧ್ಯಕ್ಷ ಹಾಗೂ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿ ಜೈನ್, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆಯ ಅಧ್ಯಕ್ಷ ಜಯರಾಜ್ ಜೈನ್, ಎಲ್ಲಾ ಸರಕಾರಿ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ವೃಂದ-ಸಂಘಗಳ ಪದಾಧಿಕಾರಿಗಳು, ಸರಕಾರಿ ನೌಕರರ ಸಂಘದ. ಪದಾಧಿಕಾರಿಗಳು ಹಾಗೂ ಸದಸ್ಯರು, ಸಹಕಾರಿ ಸಂಘದ ಉಪಾಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಹಾಜರಿದ್ದರು.

Latest 5

Related Posts