ಬೆಳ್ತಂಗಡಿ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಜುಲೈ 17ರಂದು ನಡೆದ ಪ್ರೌಢ ಶಾಲಾ ವಿಭಾಗದ ಶಟ್ಲ್ ಬ್ಯಾಡ್ಮಿಂಟನ್ನಲ್ಲಿ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ತಾಲೂಕು ಮಟ್ಟದ ಉತ್ತಮ ಆಟಗಾರ ಪ್ರಶಸ್ತಿಯನ್ನು ಸದ್ರಿ ಶಾಲೆಯ ಸಂಗಮ್ ಪಡೆದುಕೊಂಡಿದ್ದಾರೆ.






