ಫೆಸ್ಟ್ರೋನಿಕ್ಸ್-2022′ ಮಾಹಿತಿ ತಂತ್ರಜ್ಞಾನ ಮತ್ತು ಸಾಂಸ್ಕ್ರತಿಕ ಸ್ಪರ್ಧಾಕೂಟ

ಫೆಸ್ಟ್ರೋನಿಕ್ಸ್-2022′ ಮಾಹಿತಿ ತಂತ್ರಜ್ಞಾನ ಮತ್ತು ಸಾಂಸ್ಕ್ರತಿಕ ಸ್ಪರ್ಧಾಕೂಟ
Facebook
Twitter
LinkedIn
WhatsApp

‘ಬೆಳ್ತಂಗಡಿ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಅಂತಿಮ ವರ್ಷದ ಗಣಕ ಯಂತ್ರ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಂದ ಕಾಲೇಜಿನ ಪ್ರಥಮ ಮತ್ತು ದ್ವಿತೀಯ ಗಣಕ ಯಂತ್ರ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ಫ಼ೆಸ್ಟ್ರೋನಿಕ್ಸ್-2022’ ಮಾಹಿತಿ ತಂತ್ರಜ್ಞಾನ ಮತ್ತು ಸಾಂಸ್ಕ್ರತಿಕ ಸ್ಪರ್ಧಾಕೂಟವನ್ನು ಜುಲೈ 26 ಮತ್ತು 27ರಂದು ಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನು ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂದನೀಯ ಗುರು ಬಾಸಿಲ್ ವಾಸ್‌ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಸುಮಾರು 130 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದರು.ಜುಲೈ 27ರಂದು ಸಮಾರೋಪ ಸಮಾರಂಭ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಜೋಸೆಫ್ ಎನ್.ಎಂ. ರವರು ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ಪರ್ಧಾಳುಗಳಿಗೆ ಬಹುಮಾನವನ್ನು ವಿತರಿಸಿದರು.ಗಣಕ ಯಂತ್ರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರಾದ್ಯಾಪಕ ಜನಾರ್ಧನ ರಾವ್ ಡಿ. ಮತ್ತು ಮಾಹಿತಿ ತಂತ್ರಜ್ಞಾನ ವೇದಿಕೆಯ ಸಂಯೋಜಕಿಯಾದ ಪ್ರಾದ್ಯಾಪಕಿ ಜೆಸಿಂತಾ ಡಿ’ಸೋಜ ರವರು ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಮಹಮ್ಮದ್ ಸುಹೈಲ್ ಮುನೀರ್ ಮತ್ತು ತೇಜಸ್ವಿ ಕೆ. ವಂದಿಸಿದರು. ತೃತೀಯ ಬಿ.ಸಿ.ಎ. ವಿದ್ಯಾರ್ಥಿನಿಯರಾದ ದೀಪಿಕಾ ಸಾವಂತ್ ಮತ್ತು ಆತ್ಮೀಯಾ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

we

Latest 5

Related Posts