ಮೂಡುಬಿದಿರೆ ಪುರಸಭೆಆಗಸ್ಟ್ 13ರಂದು ‘ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನ

ಮೂಡುಬಿದಿರೆ ಪುರಸಭೆಆಗಸ್ಟ್ 13ರಂದು ‘ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನ
Facebook
Twitter
LinkedIn
WhatsApp

ಮೂಡುಬಿದಿರೆ: ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನವನ್ನು ಆಗಸ್ಟ್ 13ರಿಂದ 15ರವರೆಗೆ ಆಚರಿಸುವಂತೆ ರಾಜ್ಯದ ಕನ್ನಡ ಸಂಸ್ಕೃತಿ ಇಲಾಖೆ ಉಲ್ಲೇಖಿಸಿರುವಂತೆ ಮೂಡುಬಿದಿರೆ ಪುರಸಭಾ ವ್ಯಾಪ್ತಿಯಲ್ಲಿ ಎಲ್ಲರೂ ತಮ್ಮ ಮನೆಮನೆಯಲ್ಲೂ ತಮ್ಮ ಸ್ವಂತ ಖರ್ಚಿನಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ದೇಶ ಭಕ್ತಿ, ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಿಗೊಳಿಸಲು ‘ಹರ್ ಘರ್ ತಿರಂಗಾ’ ಅಭಿಯಾನವನ್ನು ಹಮ್ಮಿಕೊಂಡಿರುವುದಾಗಿ ಪುರಸಭೆ ಅಧ್ಯಕ್ಷ ಪ್ರಸಾದ್ ಕುಮಾರ್ ಪುರಸಭೆಯ ವಿಶೇಷ ಸಭೆಯಲ್ಲಿ ತಿಳಿಸಿದರು.ಈ ಅಭಿಯಾನದ ಅಂಗವಾಗಿ ಆಗಸ್ಟ್ 10 ಬುಧವಾರದಂದು ಪೂರ್ವಾಹ್ನ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಹಾಗೂ ಆಗಸ್ಟ್ 12 ಶುಕ್ರವಾರದಂದು ಕಾಲೇಜು ವಿದ್ಯಾರ್ಥಿಗಳಿಗಾಗಿ ಶ್ರೀ ಮಹಾವೀರ ಕಾಲೇಜಿನಲ್ಲಿ ಭಾಷಣ, ಪ್ರಬಂಧ ಮತ್ತು ಪೆನ್ಸಿಲ್ ಚಿತ್ರಕಲಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.ಆಗಸ್ಟ್ 13 ಶನಿವಾರದಂದು ಈ ಅಭಿಯಾನದ ಅಂಗವಾಗಿ ಪುರಸಭಾ ಕಚೇರಿಯಿಂದ ಕನ್ನಡ ಭವನದವರೆಗೆ ಪೂರ್ವಾಹ್ನ ಗಂಟೆ 9.00ಕ್ಕೆ ಜನಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು 10.30ರಿಂದ ಸಭಾ ಕಾರ್ಯಕ್ರಮ ಮತ್ತು ಪ್ರಶಸ್ತಿ ವಿತರಣಾ ಕಾರ್ಯಕ್ರಮವು ಸ್ಕೌಟ್ಸ್ ಗೈಡ್ಸ್ ಕನ್ನಡಭವನದಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದರು.ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್, ಶಾಸಕ ಉಮಾನಾಥ ಎ. ಕೋಟ್ಯಾನ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಸಹಿತ ಗಣ್ಯರು, ಪುರಸಭಾ ಸದಸ್ಯರು ಹಾಗೂ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು. ಪುರಸಭೆ ಮುಖ್ಯಾಧಿಕಾರಿ ಇಂದು ಎಂ., ಉಪಾಧ್ಯಕ್ಷೆ ಸುಜಾತಾ ಶಶಿಧರ್, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Latest News

Related Posts